ಚುನಾವಣೆ ಪೂರ್ವಭಾವಿ ಸಭೆ
ಕ.ಪ್ರ.ವಾರ್ತೆ ್ಣ ಗೌರಿಬಿದನೂರು ್ಣ ಮಾ.19
ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸಬೇಕೆಂದು ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆದ ಎನ್.ಎಂ. ರವಿನಾರಾಯಣರೆಡ್ಡಿ ಹೇಳಿದರು.
ಮಂಗಳವಾರ ರೇಲ್ವೆ ಸ್ಟೇಷನ್ ರಸ್ತೆಯಲ್ಲಿರುವ ರಾಮಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಆನೇಕ ಜನೋಪಯೋಗಿ ಕಾರ್ಯಕ್ರಮ ಹಮ್ಮಿಕೊಂಡು ಉತ್ತಮ ಆಡಳಿತ ನಡೆಸಿದೆ. ವಿದ್ಯಾರ್ಥಿಗಳಿಗೆ ಸೈಕಲ್, ಭಾಗ್ಯಲಕ್ಷ್ಮಿ ಬಾಂಡುಗಳು, 2 ದರದಲ್ಲಿ ಕೆಜಿ ಅಕ್ಕಿ ಮುಂತಾದ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡುವುದು ಕಾರ್ಯಕರ್ತರ ಕೆಲಸವಾಗಿದೆ ಎಂದರು. ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶಿವರಾಂ ಮಾತನಾಡಿ, ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ತರವಾದದ್ದು ಎಂದು ತಿಳಿಸಿದರು. ಪ್ರತಿ ಕಾರ್ಯಕರ್ತನೂ ಮತದಾರರ ಬಳಿ ಹೋಗಿ ಪಕ್ಷದ ಸಾಧನೆ ವಿವರಿಸಿ ಮತ ಯಾಚಿಸಬೇಕೆಂದು ತಿಳಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಸಿ.ಆರ್. ನರಸಿಂಹ ಮೂರ್ತಿ, ಡೈರಿ ರಮೇಶ್, ಜೆ.ವಿ. ಹನುಮೇಗೌಡ ಪುರಸಭಾ ಸದಸ್ಯರಾದ ಜಿ.ಬಾಲಾಜಿ ಮುಂತಾದವರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.