ಬೇಡಿಕೆ ಈಡೇರಿಕೆ ಒತ್ತಾಯಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ
ಕ.ಪ್ರ ವಾರ್ತೆ ್ಣ ಕೋಲಾರ ್ಣ ಮಾ. 19
ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದ ಬಳಿ ಇರುವ ಬಿ.ಆರ್.ಅಂಬೇಡ್ಕರ್ ಹಾಸ್ಟೆಲ್ನಲ್ಲಿ ಅಡುಗೆ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು. ಬಡ ದಲಿತ ವಿದ್ಯಾರ್ಥಿಗಳು ಇರುವ ಹಾಸ್ಟೆಲ್ನಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ, ಹಾಸ್ಟೆಲ್ಗೆ ಮೂಲ ಸೌಕರ್ಯಗಳು ಬೇಕೆಂದು ಈ ಹಿಂದೆ ಪ್ರತಿಭಟಿಸಿದಾಗ ಭರವಸೆ ನೀಡಿದ್ದ ಅಧಿಕಾರಿಗಳು ಗಮನ ನೀಡದಿರುವುದರಿಂದ ಹಾಸ್ಟೆಲ್ಗಳಲ್ಲಿ ಶೈಕ್ಷಣಿಕ ಪ್ರಗತಿ ಕುಸಿಯಲು ಕಾರಣವಾಗಿದೆ ಎಂದು ಆರೋಪಿಸಿದರು. ಹಾಸ್ಟೆಲ್ ವಿದ್ಯಾರ್ಥಿಗಳಾದ ಸಂದೀಪ್, ಸತೀಶ್, ರಮೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.