ಮುಖ್ಯವಾಹಿನಿಗೆ ಬರಲು ಶಿಕ್ಷಣ ಅಗತ್ಯ
ಕ.ಪ್ರ.ವಾರ್ತೆ ್ಣ ಚಿಂತಾಮಣಿ ್ಣ ಮಾ.19
ಸಮಾಜದಲ್ಲಿ ಮಹಿಳೆಯರು ಮುಖ್ಯವಾಹಿನಿಗೆ ಬರಲು ಶಿಕ್ಷಣ ಸಹಕಾರಿ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಕೆ.ವಿ. ಮೀನಾ ಶ್ರೀರಾಮರೆಡ್ಡಿ ಹೇಳಿದರು.
ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಹಿಳಾ ಮತ್ತು ಕೌಟಂಬಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಜಾಗೃತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಮಾತು ನಿಜವಾಗಬೇಕಾದರೆ ಕಡ್ಡಾಯವಾಗಿ ಶಿಕ್ಷಣ ಬಗ್ಗೆ ಹೆಚ್ಚು ಮಹಿಳೆಯರು ಅಕ್ಷಸ್ಥರಾಗಬೇಕೆಂದು ಹೇಳಿದರು.
ತಾಲೂಕು ದಂಡಾಧಿಕಾರಿ ಎಂ.ಎನ್. ಮಂಜುನಾಥ್ ಮಾತನಾಡಿ, ಹಿಂದೂ ಸಂಪ್ರದಾಯದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಮಾನ ಇದೆ. ಸರ್ಕಾರ ಕೂಡ ಶೇ. 50 ಮೀಸಲಾತಿ ಕಲ್ಪಿಸಿದೆ. ಇದನ್ನು ಹಲವು ಗಂಡಸರು ಅವರ ಅಧಿಕಾರ ದುರುಪಯೋಗಪಡಿಸಿಕೊಂಡು ಗಂಡಸರೆ ಆಡಳಿತ ನಡೆಸುತ್ತಿರುವುದು ಸರಿಯಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿಡಿಪಿಒ ತಾಲೂಕು ಅಧಿಕಾರಿ ತಾಜ್ ಉನ್ನೀಸಾ, ಶೈಲಜ ನಾರಾಯಣಸ್ವಾಮಿ, ವೆಂಕಟನಾರಾಯಣಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಮ್ಮ, ಪದ್ಮ, ಸರಸ್ವತಮ್ಮ ಇತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.