ವೇತನ ಬಿಡುಗಡೆಗಾಗಿ ಅಡುಗೆ ಸಿಬ್ಬಂದಿ ಧರಣಿ
ಕ.ಪ್ರ. ವಾರ್ತೆ ್ಣ ಕೋಲಾರ ್ಣ ಮಾ. 19
ಕಳೆದ 13 ತಿಂಗಳಿಂದ ಸಂಬಳ ನೀಡಿಲ್ಲವೆಂದು ದಿನಗೂಲಿ ಅಡುಗೆ ಸಿಬ್ಬಂದಿ ಮಂಗಳವಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಮುಂದೆ ಧರಣಿ ನಡೆಸಿದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ದಿನಗೂಲಿ ನೌಕರರಿಗೆ ವೇತನವಿಲ್ಲದೆ ನೌಕರರು ಜೀವನ ಮಾಡುವುದು ಕಷ್ಯವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವೇತನ ಬಿಡುಗಡೆಗಾಗಿ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ನೌಕರರ ವೇತನ ಬಿಡುಗಡೆ ಮಾಡುವವರೆಗೂ ಕೆಲಸಕ್ಕೆ ಹೋಗುವುದಿಲ್ಲವೆಂದು ನೌಕರರು ಎಚ್ಚರಿಕೆ ನೀಡಿದರು.
ಪ್ರತಿಭಟನೆ ನೇತೃತ್ವವನ್ನು ದಿನಗೂಲಿ ನೌಕರರ ಸಂಘದ ಅಧ್ಯಕ್ಷ ಎಂ.ಮಂಜುನಾಥ್, ಉಪಾಧ್ಯಕ್ಷ ಜಿ.ಎಂ. ಸುರೇಶ್, ವೆಂಕಟರಮಣಪ್ಪ, ಚೌಡಪ್ಪಗೌಡ, ವೆಂಕಟಮ್ಮ, ರತ್ನಮ್ಮ, ನಾರಾಯಣಮ್ಮ ಮತ್ತಿತರರು ವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.