ಚುನಾವಣೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳಿಗೆ ಸೂಚನೆ
ಕೆಜಿಎಫ್: ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಮೇ 5 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲಾ ಅಧಿಕಾರಿಗಳು ಸಹಕರಿಸಬೇಕು ಎಂದು ಬಂಗಾರಪೇಟೆ ತಹಸೀಲ್ದಾರ್ ನಾಗರಾಜ್ ಅವರು ಕೆಜಿಎಫ್ ನಗರಸಭೆಯಲ್ಲಿ ಕರೆದಿದ್ದ ಸಭೆಯಲ್ಲಿ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅತಿ ಸೂಕ್ಷ್ಮ ಮತಗಟ್ಟೆಗಳೆಂದು 74 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಕ್ಷೇತ್ರದಲ್ಲಿ ಒಟ್ಟು 227 ಮತಗಟ್ಟೆಗಳಿದ್ದು ಅವುಗಳಲ್ಲಿ 83 ಸೂಕ್ಷ್ಮ ಮತ್ತು 70 ಸಾಧಾರಣ ಮತಗಟ್ಟೆಗಳಿವೆ ಎಂದರು. 227 ಮತಗಟ್ಟೆಗಳಲ್ಲಿ ನಗರ ಪ್ರದೇಶದಲ್ಲಿ 117 ಮತ್ತು ಗ್ರಾಮೀಣ ಪ್ರದೇಶದಲ್ಲಿ 110 ಮತಗಟ್ಟೆಗಳು ಬರಲಿದೆ ಎಂಬ ಅಂಕಿಅಂಶವನ್ನು ಸಭೆಗೆ ತಿಳಿಸಿದರು. ಸಭೆಯಲ್ಲಿ ಪೌರಾಯುಕ್ತ ವಿ. ಬಾಲಚಂದರ್, ಪೊಲೀಸ್ ಉಪರಕ್ಷಣಾಧಿಕಾರಿ ರಾಜಣ್ಣ, ವೃತ್ತ ನಿರೀಕ್ಷಕರಾದ ಪುಟ್ಟಮಾದಯ್ಯ, ಟಿ.ಸಿ. ವೆಂಕಟೇಶ್, ಸಲೀಂ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.