ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿದ್ಯುತ್ ಶಾಕ್‌ನಿಂದ ಹೊರ ಬಾರದ ಬಾಲಕ ಸಾವು

Parashurama
Updated On : 21 Mar 2013, 11:04 am

ಬಂಗಾರಪೇಟೆ: ಪಾರಿವಾಳ ಹಿಡಿಯಲು ಹೋಗಿದ್ದ ಶಾಲಾ ಬಾಲಕನೊಬ್ಬನಿಗೆ ವಿದ್ಯುತ್ ಶಾಕ್ ಹೊಡೆದು ಕಳೆದ 15ದಿನಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣದೊಂದಿಗೆ ಹೋರಾಟ ನಡೆಸಿ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ.
ಪಟ್ಟಣದ ನವಚೇತನ ಶಾಲೆಯಲ್ಲಿ ಹತ್ತನೆ ತರಗತಿಯಲ್ಲಿ ಓದುತ್ತಿದ್ದ ಮಾಲೂಕು ತಾಲೂಕಿನ ಟೇಕಲ್ ಹೋಬಳಿಯ ಬೆಟ್ಟಬನಹಳ್ಳಿ ಗ್ರಾಮದ ರಾಜೇಶ್ ಎಂಬ ಬಾಲಕನೇ ಮೃತಪಟ್ಟವನು.
ಕಳೆದ 15ರಂದು ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನ ಮೇಲೆ ಇದ್ದ ಪಾರಿವಾಳವನ್ನು ಹಿಡಿಯಲು ರಾಜೇಶ್ ಮತ್ತು ಇವನ ಸ್ನೇಹಿತ ಸಿದ್ದಿಕ್ ರೈಲಿನ ಮೇಲೆ ಹತ್ತಿ ಹಿಡಿಯುವಾಗ ಆಕಸ್ಮಿಕವಾಗಿ ರೈಲಿನ ಮೇಲೆ ಹಾದು ಹೋಗಿದ್ದ ಹೈಟೆನ್ಷನ್ ಲೈನಿಗೆ ತಾಕಿ ರಾಜೇಶ್ ಭಾಗಶಃ ಸುಟ್ಟು ಹೋಗಿದ್ದ ಸಿದ್ದಿಕ್‌ಗೆ ಸಣ್ಣ ಪುಟ್ಟ ಗಾಯಗಳಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ರಾಜೇಶ್‌ನನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.15 ದಿನಗಳಿಂದ ಸಾವಿನ ಜತೆ ಹೋರಾಟ ನಡೆಸುತ್ತಿದ್ದ ರಾಜೇಶ್ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾನೆ.
ರಾಜೇಶ್ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು ಇವನನ್ನು ಕಳೆದುಕೊಂಡಿರುವುದಕ್ಕೆ ಶಾಲೆಯ ಕಾರ್ಯದರ್ಶಿ ಎಲ್. ರಾಮಕೃಷ್ಣಪ್ಪ ತೀವ್ರ ಸಂತಾಪವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments