ಕೃಷ್ಣಾಪುರ ರಸ್ತೆ ಅತಿಕ್ರಮಣ ತೆರವು
ಕ.ಪ್ರ.ವಾರ್ತೆ ಮುಳಬಾಗಲು ಮಾ.25
ತಾಲೂಕಿನ ದುಗ್ಗಸಂದ್ರ ಹೋಬಳಿ ಕೃಷ್ಣಾಪುರ ಗ್ರಾಮದಲ್ಲಿ ಗ್ರಾಮಸ್ಧರ ನಡುವೆ ನಡೆದ ಮಾತಿನ ಚಕಮಕಿ ಹಿನ್ನೆಲೆಯಲ್ಲಿ ರಸ್ತೆಗೆ ಗಿಡಗಳನ್ನು ಹಾಕಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ಉಂಟಾಗಿದ್ದ ತೊಂದರೆಯನ್ನು ಭಾನುವಾರ ನಿವಾರಿಸಲಾಯಿತು. ರಸ್ತೆಗೆ ಗಿಡಗಳನ್ನು ಹಾಕಲಾಗಿದೆ ಎಂಬ ಮಾಹಿತಿಯನ್ನು ಗ್ರಾಮಸ್ಥರ ಮೂಲಕ ತಿಳಿದ ಸಬ್ಇನ್ಸ್ಪೆಕ್ಟರ್ ಫ್ರಾನ್ಸೀಸ್ ಮತ್ತು ಪ್ರಭಾರ ಕಂದಾಯ ನಿರೀಕ್ಷಕ ಸಿ.ಸುಬ್ರಮಣ್ಯಂ ಗ್ರಾಮಕ್ಕೆ ಭೇಟಿ ನೀಡಿದ್ದರು. ಸಾರ್ವಜನಿಕರ ರಸ್ತೆಗೆ ಅಡ್ಡ ಹಾಕುವುದು ಕಾನೂನಿಗೆ ವಿರುದ್ಧವಾಗಿದೆ. ಸಮಸ್ಯೆಗಳನ್ನು ಕಾನೂನಿನ ಮೂಲಕವಾಗಿ ಪರಿಹರಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಪೊಲೀಸ್ ಠಾಣೆಗೆ ಹೋಗಲು ಸೂಚಿಸಿದರು. ಗ್ರಾಮಸ್ಧರ ನೆರವಿನೊಂದಿಗೆ ರಸ್ತೆಗೆ ಹಾಕಲಾಗಿದ್ದ ಗಿಡಗಳನ್ನು ತೆರವುಗೊಳಿಸಲಾಯಿತ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.