'ಟಿಕೆಟ್ ಸಿಗದಿದ್ದರೆ ವೈ.ಸಂಪಂಗಿ ಪಕ್ಷೇತರರಾಗಿ ಗೆಲ್ಲಿಸ್ತೀವಿ'
ಕೆಜಿಎಫ್: ಕೆಜಿಎಫ್ ಕ್ಷೇತ್ರದ ಶಾಸಕ ವೈ.ಸಂಪಂಗಿ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂಬ ಗೊಂದಲದಿಂದಾಗಿ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಶಾಸಕ ಸಂಪಂಗಿ ಅವರಿಗೆ ಟಿಕೆಟ್ ಸಿಗದಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಿ ನಿಮ್ಮನ್ನು ಅತ್ಯಧಿಕ ಮತಗಳಿಂದ ನಾವು ಗೆಲ್ಲಿಸುತ್ತೆವೆ ಎಂದು ನೂರಾರು ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.
ಬೇತಮಂಗಲ ಗ್ರಾಮದ ಸಂಪಂಗಿ ಅವರ ನಿವಾಸದ ಆವರಣದಲ್ಲಿ ಭಾನುವಾರ ಕೆಜಿಎಫ್ ನಗರ ಮತ್ತು ಗ್ರಾಮೀಣ ಭಾಗದ ಸಾವಿರಕ್ಕೂ ಹೆಚ್ಚು ಮಂದಿ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಸಭೆ ನಡೆಸಿದರು.
ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ಕೆಲಸ ನೋಡಿ ಜನರು ತಮ್ಮನ್ನು ಬೆಂಬಲಿಸಲಿದ್ದಾರೆ. ನೀವು ಪಕ್ಷೇತರ ಅಭ್ಯರ್ಥಿಯಾಗಿ ನಿಂತರೂ ಗೆದ್ದೇ ಗೆಲ್ಲಿಸುತ್ತೇವೆ ಎಂದು ಸಭೆಯಲ್ಲಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಭರವಸೆ ನೀಡಿದರು.
ಈ ವೇಳೆ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಆನಂದ್, ಮಹಬೂಬ್, ನಾರಾಯಣಸ್ವಾಮಿ, ಸೀನಪ್ಪ, ಧರಣಿ ಯತೀಶ್, ವಿಜಯಕುಮಾರ್, ಕೆ.ಸಿ.ನಾಗರಾಜ್, ಶ್ರೀನಿವಾಸ್ ಸನ್ನಾವುಲ್ಲಾ, ರಾಮಚಂದ್ರ ಅಮರೇಂದ್ರ ಮೌನಿ, ಚಲಪತಿ, ನಾರಾಯಣಸ್ವಾಮಿ ಸೇರಿದಂತೆ ಇತರೇ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.