ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೌಕರರು ಕ್ರೀಡೆಗಳಲ್ಲಿ ಭಾಗವಹಿಸಲು ಸದೃಢರಾಗಿ

Parashurama
Updated On : 25 Mar 2013, 11:38 am

ಚಿಂತಾಮಣಿ: ಸರ್ಕಾರಿ ನೌಕರರು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಮಾನಸಿಕ ಹಾಗೂ ದೈಹಿಕವಾಗಿ ವೃದ್ಧಿಗೊಳ್ಳಲು ಮುಂದಾಗಬೇಕೆಂದು ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಡಾ.ಮಧುಸೂದನ್ ರೆಡ್ಡಿ ಕರೆ ನೀಡಿದರು.
ಚಿಕ್ಕಬಳ್ಳಾಪುರದಲ್ಲಿ ಜಿಪಂ, ಜಿಲ್ಲಾಡಳಿತ ಕ್ರೀಡಾ ಇಲಾಖೆ ಮತ್ತು ಸರ್ಕಾರಿ ನೌಕರರ ಸಂಘ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು 2012-13 ರಲ್ಲಿ ಭಾಗವಹಿಸಿದ ಚಿಂತಾಮಣಿ ತಾಲ್ಲೂಕು ದೊಡ್ಡಹಳ್ಳಿ ಗ್ರಾಮದ ಶಿಕ್ಷಕ ಕೆ.ರಹಿಮಾನ್ ಖಾನ್ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ಶಿಕ್ಷಕರನ್ನು ಅಭಿನಂದಿಸಿ ಮಾತನಾಡಿದರು.
ಶಿಕ್ಷಕರು ಸದಾ ಕೆಲಸದ ಒತ್ತಡದಿಂದ ವಿವಿಧ ಕಾಯಿಲೆಗಳಿಗೆ ತುತ್ತಾಗುವ ಅವಕಾಶಗಳು ಹೆಚ್ಚು ಇರುವುದರಿಂದ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ತಾಲೂಕು ಅಧ್ಯಕ್ಷ ಆರ್.ನಾರಾಯಣರೆಡ್ಡಿ ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ರಂಗಯ್ಯ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಜಯ ಸಾಧಿಸಿದ ಶಿಕ್ಷಕರನ್ನು ಅಭಿನಂದಿಸಿದರು. ಕ್ರೀಡೆಯಲ್ಲಿ ಭಾಗವಹಿಸಿದ ರಾಮಚಂದ್ರೇಗೌಡ, ನಟರಾಜ್, ನಾರಾಯಣಸ್ವಾಮಿ, ಆರ್.ಅಶೋಕ್‌ಕುಮಾರ್, ಲಕ್ಷ್ಮಿನಾರಾಯಣರೆಡ್ಡಿ, ಸುಧಾಕರಬಾಬು, ರಾಜಗೋಪಾಲ್, ಮಂಜುನಾಥ್, ವೆಂಕಟೇಶ್ ಸೇರಿದಂತೆ ಇನ್ನೂ ಹಲವು ಸರ್ಕಾರಿ ನೌಕರರು ಉಪಸ್ಥಿತರಿದ್ದರು.
ಚುನಾವಣೆ ಕೆಲಸ ವಿನಾಯ್ತಿಗೆ ಮೊರೆ: ಮೇ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಕಾರ್ಯಕ್ಕೆ ತಾಲೂಕಿನ ವಿವಿಧ ಇಲಾಖೆಗಳಿಂದ ನೌಕರರನ್ನು ನೇಮಕ ಮಾಡಿಕೊಳ್ಳುವಾಗ ಗರ್ಭಿಣಿಯರು, ಬಾಣಂತಿಯರು, ಅಂಗವಿಕಲರು, ನಿವೃತ್ತಿ ಅಂಚಿನಲ್ಲಿರುವವರು ಹಾಗೂ ಅನಾರೋಗ್ಯಪೀಡಿತ ನೌಕರರಿಗೆ ಚುನಾವಣಾ ಕೆಲಸದಿಂದ ವಿನಾಯಿತಿ ನೀಡಬೇಕೆಂದು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ನಾರಾಯಣರೆಡ್ಡಿಯವರು ಮನವಿ ಮಾಡಿದ್ದಾರೆ.
ಇಂತಹವರಿಗೆ ಚುನಾವಣಾ ನೇಮಕಾತಿ ಆದೇಶಗಳನ್ನು ನೀಡುವುದರಿಂದ ಚುನಾವಣಾ ಕೆಲಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳು ಬಹಳವಾಗಿವೆಯೆಂದು ಸ್ಪಷ್ಟಪಡಿಸಿರುವ ಅವರು ಸಂಬಂಧಿಸಿದವರು ಈಗಲೇ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ಈ ಕುರಿತು ಮಾಹಿತಿ ನೀಡಿ ಚುನಾವಣಾ ಕಾರ್ಯಕ್ಕೆ ಆಸಕ್ತ ಹಾಗೂ ಆರೋಗ್ಯವಂತ ನೌಕರರನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಬೇಕೆಂದು ಕೋರಿದ್ದಾರಲ್ಲದೆ ಚುನಾವಣಾ ಕೆಲಸಕ್ಕೆ ಹಾಗೂ ಸರ್ಕಾರದ ಕರ್ತವ್ಯಗಳಿಗೆ ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments