ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಹಕಾರ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ತಡೆ ಸ್ವಾಗತಾರ್ಹ

Parashurama
Updated On : 25 Mar 2013, 11:35 am

ಕ.ಪ್ರ.ವಾರ್ತೆ, ಕೋಲಾರ, ಮಾ.25
ಸಹಕಾರ ರಂಗದಲ್ಲಿ ಅನಗತ್ಯ ರಾಜಕೀಯ ಹಸ್ತಕ್ಷೇಪ ತಡೆಯಲು ಕರ್ನಾಟಕ ಸಹಕಾರ ಇಲಾಖೆಯು ಸಂವಿಧಾನ ತಿದ್ದುಪಡಿಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ ಎಂದು ಸಹಕಾರ ಯೂನಿಯನ್‌ನ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ತಿಳಿಸಿದರು. ಅಭಿಪ್ರಾಯಪಟ್ಟರು.
ಅವರು ಸೋಮವಾರ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ತಿದ್ದುಪಡಿ ಕುರಿತ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಇಲಾಖೆಯಲ್ಲಿ ಹಸ್ತಕ್ಷೇಪವನ್ನು ತಡೆಯಲು ಚುನಾವಣಾ ಆಯೋಗವು ಚುನಾವಣೆ ವ್ಯವಸ್ಥೆಯನ್ನು ಮಾಡಿ ಸಹಕಾರಿ ಚುನಾವಣೆಯನ್ನು ಜಾರಿಗೆ ತಂದಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದರಲ್ಲದೆ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಅಧಿಕಾರ ಮತ್ತು ಎಲ್ಲಾ ಸಾಧಕ ಬಾಧಕಗಳನ್ನು ನಿವಾರಿಸಿ ಒತ್ತಡ ಮುಕ್ತವನ್ನಾಗಿಸಿದೆ ಎಂದು ಅಭಿಪ್ರಾಯಿಸಿದರು.ಒಂದು ವೇಳೆ ಚುನಾವಣಾ ಸಂಬಂಧ ಯಾವುದೇ ತಕರಾರು ಮತ್ತು ವ್ಯಾಜ್ಯಗಳನ್ನು ಅಧಿಕಾರ ವ್ಯಾಪ್ತಿಯ ಸಿವಿಲ್ ನ್ಯಾಯಾಲಯದಲ್ಲಿ ದಾಖಲು ಮಾಡಬಹುದಾದಂತಹ ಅನುಕೂಲವೂ ಒದಗಿಬಂದಿದೆ ಎಂದರು.  ಜಿಲ್ಲಾ ಸಹಕಾರ ಯೂನಿಯನ್ ಮಾಜಿ ಅಧ್ಯಕ್ಷ ಉರಿಗಿಲಿ ಎಸ್.ಆರ್. ರುದ್ರಸ್ವಾಮಿ ಮಾತನಾಡಿದರು.
ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ವೆಂಕಟರೆಡ್ಡಿ ಮಾತನಾಡಿ, ರಾಜಕೀಯ ಹಸ್ತಕ್ಷೇಪದಿಂದ ಸಹಕಾರ ರಂಗವನ್ನು ದೂರವಿಡುವುದೇ ಈ ತಿದ್ದುಪಡಿಯ ಉದ್ದೇಶವಾಗಿದೆ. ಈ ತಿದ್ದುಪಡಿಗೆ ಸಹಕಾರ ಸಂಘಗಳ ಸ್ವಾಗತವಿದೆ ಎಂದರು. ಕಾರ್ಯಾಗಾರದಲ್ಲಿ ಕೋ.ಚಿ. ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮದ್ದೇರಿ ಎಸ್.ರಾಮೇಗೌಡ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ದಯಾನಂದ್, ಯತೀಶ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments