ಹುಣಸೆ ಮರದಿಂದ ಬಿದ್ದು ವ್ಯಕ್ತಿ ಸಾವು
ಚಿಂತಾಮಣಿ: ಹುಣಸೆ ಮರದಲ್ಲಿ ಹಣ್ಣು ಕೀಳುತ್ತಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಐಮರೆಡ್ಡಿಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ತಾಲೂನ ಐಮರೆಡ್ಡಿಹಳ್ಳಿ ಗ್ರಾಮದ ಶ್ರೀರಾಮಪ್ಪ (50) ಮೃತಪಟ್ಟವರು. ಸೋಮವಾರ ಬೆಳಗ್ಗೆ ಹುಣಸೆ ಮರಗಳಲ್ಲಿರುವ ಹಣ್ಣುಗಳನ್ನು ಕೀಳುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಮರದಿಂದ ಕೆಳಗೆ ಬಿದ್ದ ಈತ ತೀವ್ರ ಗಾಯಗೊಂಡ. ತಕ್ಷಣ ಈತನನ್ನು ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.