ಚುನಾವಣೆ: ವಿನಾಯ್ತಿಗೆ ಮನವಿ
ಗುಡಿಬಂಡೆ: ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಾಣಾ ಕಾರ್ಯಕ್ಕೆ ನಿವೃತ್ತಿ ಅಂಚಿನಲ್ಲಿರುವವರು, ಗರ್ಭಿಣಿಯರು, ಅಂಗವಿಕಲರು, ಬಾಣಂತಿಯರು ಹಾಗೂ ಅನಾರೋಗ್ಯ ಪೀಡಿತ ನೌಕರರನ್ನು ಪರಿಗಣಿಸಬಾರದೆಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಮತ್ತು ಪದಾಧಿಕಾರಿಗಳು ಚುನಾವಣಾಧಿಕಾರಿಗಳನ್ನು ಕೋರಿದ್ದಾರೆ.
ಇಂತಹ ನೌಕರರನ್ನು ಚುನಾವಣಾ ಕೆಲಸಕ್ಕೆ ಬಳಸಿಕೊಳ್ಳುವುದರಿಂದ ಕರ್ತವ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುವ ಸಾಧ್ಯತೆಗಳಿವೆ. ನ್ಯೂನತೆಗೆ ಒಳಗಾಗಿರುವ ನೌಕರರು ಈಗಾಗಲೇ ತಮ್ಮ ಇಲಾಖಾ ಮುಖ್ಯಸ್ಥರಿಗೆ ಹಾಗೂ ಸಂಘಕ್ಕೆ ಈ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಹೀಗಾಗಿ ಚುನಾವಣಾ ಕಾರ್ಯಕ್ಕೆ ಆರೋಗ್ಯವಂತ ನೌಕರರನ್ನು ನೇಮಕ ಮಾಡಿಕೊಳ್ಳುವಂತೆ ಕೋರಿರುವ ಪದಾಧಿಕಾರಿಗಳು ಚುನಾವಣೆ ಮತ್ತು ಸರ್ಕಾರದ ಕರ್ತವ್ಯಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.