ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಾಳುಬಿದ್ದ ಕೆಂಚಾರ್ಲಹಳ್ಳಿ ಶೌಚಾಲಯಗಳು: ಜನಪ್ರತಿನಿಧಿಗಳು ಇತ್ತ ನೋಡುವರೆ?

Parashurama
Updated On : 26 Mar 2013, 10:22 am

ಚಿಂತಾಮಣಿ: ಗ್ರಾಮೀಣ ಪ್ರದೇಶದ ವ್ಯಾಪ್ತಿಯ ಹಳ್ಳಿಗಾಡಿನ ಜನಸಾಮಾನ್ಯರ ಅನುಕೂಲಕ್ಕಾಗಿ ನಿರ್ಮಿಸಿರುವ ಕೆಂಚಾರ್ಲಹಳ್ಳಿ ಗ್ರಾಮ ಶೌಚಾಲಯಗಳು ಉಪಯೋಗಕ್ಕೆ ಬಾರದೆ ನಿರುಪಯುಕ್ತವಾಗಿರುವ ಬಗ್ಗೆಸಾರ್ವಜನಿಕರು ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಚಿಲಕಲನೇರು ಹೋಬಳಿ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ಕಳೆದ 2004ರ ಫೆರ.15ರಂದು ಸಾರ್ವಜನಿಕರ ಸುಲಭ್ ಶೌಚಾಲಯ ಗ್ರಾಮ ಪಂಚಾಯ್ತಿ ವತಿಯಿಂದ ಉದ್ಘಾಟನೆಗೊಂಡಿರುವುದು ಸರಿಯಷ್ಟೆ. ಆದರೆ ಸರ್ಕಾರ ಗ್ರಾಮೀಣ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು ಜಾರಿ ಮಾಡುತ್ತಿದೆ. ಆದರೆ, ಗ್ರಾಮ ಪಂಚಾಯ್ತಿ ನಿರ್ಲಕ್ಷದಿಂದ ಹಲವಾರು ವರ್ಷಗಳು ಕಳೆದರೂ ನಿರ್ಮಿಸಿರುವ ಶೌಚಾಲಯಗಳು ನಿರುಪಯುಕ್ತವಾಗುತ್ತಿವೆ ಎಂಬುದಕ್ಕೆ ಕೆಂಚಾರ್ಲಹಳ್ಳಿ ಗ್ರಾಮದ ಶೌಚಾಲಯಗಳೇ ಉದಾಹರಣೆಯಾಗಿವೆ.
ತಾಲೂಕಿನ ಅತಿ ಸೂಕ್ಷ್ಮ ಪ್ರದೇಶವಾದ ಕೆಂಚಾರ್ಲಹಳ್ಳಿ ಗ್ರಾಮವು ಅರ್ಧ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಹಾಗೂ ಉಳಿದರ್ಧ ಚಿಂತಾಮಣಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದೆ. ಎರಡೂ ಕ್ಷೇತ್ರಗಳ ಶಾಸಕರ ಪ್ರತಿಷ್ಠೆಯಾಗಿಯೂ ಈ ಗ್ರಾಮವಿದೆ.
ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಶಾಸಕರಾದ ವಿ.ಮುನಿಯಪ್ಪ ಹಾಗೂ ಎಂ.ಸಿ. ಸುಧಾಕರ್ ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸದೆ ಇರುವ ಬಗ್ಗೆ ಈ ಭಾಗದ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಸ್ಥಳೀಯ ನಿವಾಸಿಗಳು ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.
ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ಪಕ್ಕದಲ್ಲೇ ಇರುವ ನಿರುಪಯುಕ್ತ ಶೌಚಾಲಯ ಸುತ್ತಮುತ್ತ ಸ್ವಚ್ಛತೆ ಇಲ್ಲದೆ ಕಸದ ರಾಶಿಗಳು ತುಂಬಿಕೊಂಡು ದುರ್ವಾಸನೆ ಹೊಡೆಯುತ್ತಿದೆ.
ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ರಾಷ್ಟ್ರೀಕೃತ ಬ್ಯಾಂಕ್, ಟಿಎಪಿಸಿಎಂಎಸ್ ಸೊಸೈಟಿ, ವ್ಯಾಪಾರ ವಹಿವಾಟು ಸ್ಥಳವಾದ ಕೆಂಚಾರ್ಲಹಳ್ಳಿಯಲ್ಲಿ ಸಾರ್ವಜನಿಕರಿಗೆ ಶೌಚಾಲಯ ಇಲ್ಲದೆ ಬಯಲು ಪ್ರದೇಶಗಳಲ್ಲೇ ಎಲ್ಲಂದರಲ್ಲೆ ಮೂತ್ರ ವಿಸರ್ಜನೆ ಮಾಡುವುದು ಕಂಡುಬರುವುದು ಸಾಮಾನ್ಯ ದೃಶ್ಯವಾಗಿದೆ.
ರಾತ್ರಿ ವೇಳೆಯಂತೂ ಕಿಡಿಗೇಡಿಗಳು ಹಾಗೂ ಕಳ್ಳಕಾಕರು ಶೌಚಾಲಯದ ಒಳ ಮತ್ತು ಹೊರ ಭಾಗಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರು ಸಹ ಗ್ರಾಮಸ್ಥರಲ್ಲಿ ಕೇಳಿ ಬರುತ್ತಿದೆ. ಸರ್ಕಾರ ವತಿಯಿಂದ ಲಕ್ಷಾಂತರ ರು. ವೆಚ್ಚದಲ್ಲಿ ನಿರ್ಮಾಣಗೊಂಡ ಶೌಚಾಲಯವನ್ನು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಸಾರ್ವಜನಿಕರ ಉಪಯೋಗಕ್ಕೆ ಕ್ರಮ ಕೈಗೊಳ್ಳುವರೇ ಎಂಬುದು ಕಾದುನೋಬೇಕಿದೆ.
-ಎನ್.ಬಾಬು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments