ಶಂಕರ ನಾರಾಯಣಬ್ರಹ್ಮ ರಥೋತ್ಸವ
ಮಾಲೂರು: ಪಟ್ಟಣದ ಶಂಕರ ನಾರಾಯಣಸ್ವಾಮಿ ಬ್ರಹ್ಮರಥೋತ್ಸವ ಬುಧವಾರದಂದು ನಡೆಯಲಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಮುಜರಾಯಿ ಇಲಾಖೆಗ ಸೇರಿದ ಶ್ರೀ ಶಂಕರನಾರಾಯಣಸ್ವಾಮಿ ದೇವಾಲಯದಲ್ಲಿ ಕಳೆದ 23 ರಿಂದ ರಥೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಗಿರಿಜಾ ಕಲ್ಯಾಣೋತ್ಸವ ಮಂಗಳವಾರದಂದು ಅದ್ದೂರಿಯಾಗಿ ನಡೆದಿದೆ. ಬುಧವಾರದಂದು ಬ್ರಹ್ಮ ರಥೋತ್ಸವ ನಡೆಯಲಿದೆ.
ವಸ್ತು ಪ್ರದರ್ಶನ, ಮಾರಾಟ ಮೇಳ ಇಂದು
ಕೋಲಾರ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2012-13ನೇ ಸಾಲಿನ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಾ.27 ರಿಂದ 29ರವರೆಗೆ ಸುಗಟೂರು ಶ್ರೀ ಕ್ಷೇತ್ರದಲ್ಲಿ ರಾವಣೇಶ್ವರ ಉತ್ಸವ ಹಾಗೂ ಜಾತ್ರೆಯಲ್ಲಿ ಏರ್ಪಡಿಸಲಾಗಿದೆ.
ಪರೀಕ್ಷೆ: ನಕಲಿ ವಿದ್ಯಾರ್ಥಿ ಬಂಧನ
ಚಿಂತಾಮಣಿ: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯಲ್ಲಿ ನಕಲಿ ವಿದ್ಯಾರ್ಥಿಯೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಅಶೋಕ ಮಣಿಗಾನಹಳ್ಳಿ ಗ್ರಾಮ ನಿವಾಸಿ ಬದಲಾಗಿ ಅದೇ ಗ್ರಾಮದ ರಾಮಚಂದ್ರ ಎಂಬ ಆಸಾಮಿ ಬರೆಯುತ್ತಿರುವಾಗ ಪರೀಕ್ಷೆ ಮೇಲ್ವಿಚಾರಕರು ಅನುಮಾನಗೊಂಡು ಪರಿಶೀಲಿಸಿದಾಗ ವಿದ್ಯಾರ್ಥಿಗೂ ಹಾಗೂ ಭಾವಚಿತ್ರಕ್ಕೂ ಅಜಗಜಾಂತರ ವ್ಯತ್ಯಾಸವಿದ್ದುದು ಕಂಡುಬಂದಿತು. ಇದರಿಂದ ಪರೀಕ್ಷಾ ಮೇಲ್ವಿಚಾರಕರು ಪೊಲೀಸರಿಗೆ ದೂರು ನೀಡಿ ವಿದ್ಯಾರ್ಥಿಯನ್ನು ವಿಚಾರಣೆಗಾಗಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಪತ್ನಿ ಕೊಲೆ: ಆರೋಪಿ ಬಂಧನ
ಚಿಂತಾಮಣಿ:ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಹೆಂಡತಿ ಕೊಲೆ ಮಾಡಿದ ಆರೋಪಿ ಗಂಡನನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ತಾಲೂಕಿನ ಬುಕ್ಕನಹಳ್ಳಿ ಗ್ರಾಮದ ಶಾಂತಮ್ಮರನ್ನು ಕಳೆದ ಜನವರಿ 31ರಂದು ಬೆಳಗಿನ ಜಾವ 6 ಗಂಟೆಯಲ್ಲಿ ಗ್ರಾಮದಿಂದ ಕೆಲಸಕ್ಕೆಂದು ಬರುತ್ತಿರುವಾಗ ಅರಿತವಾದ ಚಾಕುವಿನಿಂದ ತಿವಿದು ಕೊಲೆ ಮಾಡಿ ಪರಾರಿಯಾಗಿದ್ದ ಅಶ್ವತ್ಥ ಅಲಿಯಾಸ್ ಪ್ರಸಾದ್ನನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಆರೋಪಿಯು ಶ್ರೀನಿವಾಸಪುರ ತಾಲೂಕಿನ ಕೂತಸಂದ್ರ ಗ್ರಾಮದ ತೋಟದ ಮನೆಯಲ್ಲಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ನಗರ ವೃತ್ತ ನಿರೀಕ್ಷಕ ನಂಜಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಬಂಧಿಸಿ ಠಾಣೆಗೆ ಕರೆತಂದಿದ್ದಾರೆ. ಬಂಧಿತ ಆರೋಪಿ ಪೊಲೀಸರ ವಿಚಾರಣೆ ವೇಳೆ ಪತ್ನಿಯು ಅನೈತಿಕ ಸಂಬಂಧ ಇಟ್ಟುಕೊಂಡಿದ್ದರಿಂದ ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.