ನಕಲಿ ಲೋಕಾಯುಕ್ತ ಅಧಿಕಾರಿ ಬಂಧನ
ಕಡೂರು: ಲೋಕಾಯುಕ್ತರು ಎಂದು ಹೇಳಿಕೊಂಡು ಕಂದಾಯ ಇಲಾಖೆಯ ವಿವಿಧ ಅಧಿಕಾರಿ ನೌಕರರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಕಂದಾಯ ವಿಭಾಗದವರ ಸಹಕಾರದಿಂದ ಚಿಕ್ಕಮಗಳೂರು ಲೋಕಾಯುಕ್ತ ಪೋಲೀಸರು ಬಂಧಿಸುವ ಮೂಲಕ ನಕಲಿ ಲೋಕಾಯುಕ್ತ ವ್ಯಕ್ತಿಯು ಪೋಲೀಸರ ಅತಿಥಿಯಾಗಿರುವ ಘಟನೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕು ಗಿರಿಯಾಪುರದ ಮಂಜುನಾಥ ಎಂಬುವನೇ ನಕಲಿ ಲೋಕಾಯುಕ್ತ ಸಿಬ್ಬಂದಿಯಾಗಿದ್ದು ಇದೀಗ ಕಡೂರು ಪೋಲೀಸರ ವಶದಲ್ಲಿರುವ ವ್ಯಕ್ತಿಯಾಗಿದ್ದಾನೆ. ಈತ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದುದರಿಂದ ಅನುಮಾನಗೊಂಡ ರೆವಿನ್ಯೂ ಇನ್ಸ್ಪೆಕ್ಟರ್ ಮೂರ್ತಿ, ಕಿರಣ್ ಮತ್ತು ಮತ್ತೊಬ್ಬ ಕಂದಾಯಾಧಿಕಾರಿ ಸೇರಿಕೊಂಡು ಚಿಕ್ಕಮಗಳೂರು ಲೋಕಾಯುಕ್ತರಿಗೆ ಈ ಬಗ್ಗೆ ತಿಳಿಸಿದ್ದರಿಂದ ಕಡೂರು ಪೋಲೀಸರ ಅತಿಥಿಯಾಗಿದ್ದಾನೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.