ಕೋಲಾರ

ಮುನಿಯಪ್ಪ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಕ.ಪ್ರ.ವಾರ್ತೆ  ಕೋಲಾರ ಮಾ.28
ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಸಾಮಾಜಿಕ ನ್ಯಾಯದಡಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ನಿರ್ಧರಿಸಿದ್ದಾರೆ.
ಇದರಿಂದಾಗಿ ಚುನಾವಣಾ ಆಖಾಡಕ್ಕೆ ಇಳಿಯುವ ಅಭ್ಯರ್ಥಿಗಳ ಅಳಿವು-ಉಳಿವು ಸಹ ಸಚಿವ ಮುನಿಯಪ್ಪನವರ ಮೇಲೆ ಅವಲಂಬಿತವಾದ್ದಂತೆ ಗೋಚರಿಸುತ್ತಿದೆ.
2014ಕ್ಕೆ ಲೋಕಸಭೆಗೆ ಚುನಾವಣೆ ನಡೆಯಲಿರುವುದರಿಂದ ತಮ್ಮ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು 8 ವಿಧಾನಸಭಾ ಕ್ಷೇತ್ರಗಳಿಗೆ ಗೆಲ್ಲುವ ಹಾಗೂ ತಮ್ಮ ಮಾತು ಕೇಳುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮುನಿಯಪ್ಪನವರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಕೋಲಾರ ಜಿಲ್ಲೆಯ ಆರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಶಿಡ್ಲಘಟ್ಟ ಕ್ಷೇತ್ರಗಳು ಲೋಕಸಭೆ ವ್ಯಾಪ್ತಿಗೆ ಬರಲಿರುವುದರಿಂದ ವಿಧಾನಸಭೆಗೆ ತಮಗೆ ನಿಷ್ಠೆಯಾಗಿರುವ ವ್ಯಕ್ತಿಗಳನ್ನು ಅಭ್ಯರ್ಥಿಗಳನ್ನಾಗಿ ಮಾಡಿ ಒಂದು ರೀತಿಯಲ್ಲಿ ಮ್ಯಾಚ್ ಫಿಕ್ಸಿಂಗ್ ರಾಜಕಾರಣದ ಮೂಲಕ ತಮ್ಮ ರಾಜಕೀಯ ಶಕ್ತಿ ಹೆಚ್ಚಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.
30 ವರ್ಷಗಳಿಂದ ತಮಗೆ ಬೇಕಾದವರನ್ನು ವಿಧಾನಸಭೆಗೆ ಆಯ್ಕೆ ಮಾಡಿ ಕಳುಹಿಸಿ ತಮ್ಮ ಚುನಾವಣೆಯಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಸುಲಭವಾಗಿ ಸಂಸತ್‌ಗೆ ಆಯ್ಕೆಯಾಗುತ್ತಾ ಸೋಲಿಲ್ಲದ ಸರದಾರನೆಂದು ಹೆಸರು ಮಾಡಿರುವ ಕೆ.ಎಚ್. ಮುನಿಯಪ್ಪನವರು, ಈ ಬಾರಿ ತಮ್ಮದೇ ಪರಿಕಲ್ಪನೆಯ ಸಾಮಾಜಿಕ ರಾಜಕಾರಣ ಸೂತ್ರದಡಿ ಎಲ್ಲಾ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಸರತ್ತು ನಡೆಸಿದ್ದಾರೆ. ಕೋಲಾರದಲ್ಲಿ ಅಲ್ಪಸಂಖ್ಯಾತ, ಮಾಲೂರಿನಲ್ಲಿ ಒಕ್ಕಲಿಗ ಇಲ್ಲವೇ ಹಿಂದುಳಿದ ವರ್ಗ, ಶ್ರೀನಿವಾಸಪುರದಲ್ಲಿ ಬ್ರಾಹ್ಮಣ, ಕೆಜಿಎಫ್‌ನಲ್ಲಿ ಪರಿಶಿಷ್ಟ ಮಹಿಳೆ, ಮುಳಬಾಗಿಲು ಮತ್ತು ಬಂಗಾರಪೇಟೆಯಲ್ಲಿ ಪರಿಶಿಷ್ಟ ಜನಾಂಗಕ್ಕೆ ಸೇರಿದ ಪುರುಷ, ಚಿಂತಾಮಣಿಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಮಹಿಳೆ ಇಲ್ಲವೇ ಇದೇ ಕೋಮಿಗೆ ಸೇರಿದ ಪ್ರಬಲ ಪುರುಷ ಹಾಗೂ ಶಿಡ್ಲಘಟ್ಟದಲ್ಲಿ ಹಾಲಿ ಶಾಸಕ ವಿ.ಮುನಿಯಪ್ಪ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ತಮ್ಮ ಶಕ್ತಿ ಹೆಚ್ಚಿಸಿಕೊಳ್ಳುವುದಲ್ಲದೆ, ಕೇಂದ್ರದಲ್ಲಿ ಪ್ರಭಾವಿ ಸಚಿವರಾಗಿ ಹೊರ ಹೊಮ್ಮುವುದಕ್ಕೆ ಚಿಂತನೆ ನಡೆಸಿದ್ದಾರೆ.
ಮಾಲೂರಿನಲ್ಲಿ ಬಿಜೆಪಿಯ ಹಾಲಿ ಶಾಸಕ ಕೃಷ್ಣಯ್ಯ ಶೆಟ್ಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಲು ನಡೆಸಿದ ಪ್ರಯತ್ನಕ್ಕೆ ಹೈಕಮಾಂಡ್ ಅವಕಾಶ ನೀಡಿಲ್ಲ, ಹಾಗಾಗಿ, ವಕೀಲ ಸೋಮಶೇಖರ್, ಮಾಜಿ ಶಾಸಕ ಎ.ನಾಗರಾಜ್, ಕೆಪಿಸಿಸಿ ಪದಾಧಿಕಾರಿ ರಘುನಾಥ್ ಅವರಲ್ಲಿ ಒಬ್ಬರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಮಾಡಲು ಚಿಂತನೆ ನಡೆಸಿದ್ದಾರೆ. ಕೆಜಿಎಫ್‌ನಲ್ಲಿ ಸಚಿವ ಮುನಿಯಪ್ಪ ಪುತ್ರಿ ರೂಪಾ ಶಶಿಧರ್ ಸ್ಪರ್ಧಿಸುವುದು ಬಹುತೇಕ ಖಚಿತ. ಮುಳಬಾಗಿಲಿನಲ್ಲಿ ಹಾಲಿ ಶಾಸಕ ಅಮರೇಶ್ ವಿರುದ್ಧ ಕಾರ್ಯಕರ್ತರಲ್ಲಿ ಅಸಮಾಧಾನ ಇರುವುದರಿಂದ ಅಲ್ಲಿನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಚಿವ ಮುನಿಯಪ್ಪ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!