ಕೋಲಾರ

ಭ್ರಷ್ಟ ಬಿಜೆಪಿಗೆ ರಾಜ್ಯದಿಂದ ಗೆಟ್‌ಪಾಸ್ ನೀಡಿ

ಕ.ಪ್ರ.ವಾರ್ತೆ ್ಣ ಬಂಗಾರಪೇಟೆ ್ಣ ಮಾ.29
ಭ್ರಷ್ಟ ಬಿಜೆಪಿ ಸರ್ಕಾರದ ಹಗರಣಗಳನ್ನು ಎಲೆಎಲೆಯಾಗಿ ಜನ ಸಾಮಾನ್ಯರಿಗೆ ತಿಳಿಸುವ ಮೂಲಕ ಬಿಜೆಪಿಯನ್ನು ರಾಜ್ಯದಿಂದಲೇ ಬುಡ ಸಮೇತ ಕಿತ್ತು ಹಾಕಲು ಕ್ಷೇತ್ರದ ಜನರು ಮುಂದಾಗಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಎನ್. ನಾರಾಯಣಸ್ವಾಮಿ ಕರೆ ನೀಡಿದರು.
ಚುನಾವಣೆ ಪ್ರಯುಕ್ತ ಅಭ್ಯರ್ಥಿ ಎಸ್.ಎನ್. ನಾರಾಯಣಸ್ವಾಮಿ ತಾಲೂಕಿನ ಆಲಂಬಾಡಿ ಜೋತೇನಹಳ್ಳಿ ಪಂಚಾಯ್ತಿಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಹಿಂದೆದೂ ಕಾಣದಷ್ಟು ಭೀಕರ ಬರ ಆವರಿಸಿದೆ. ಇಂತಹ ವೇಳೆ ಯಾವುದೇ ಬರ ಪರಿಹಾರ ಯೋಜನೆಗಳನ್ನು ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ, ಕನಿಷ್ಠ ಪಕ್ಷ ಕುಡಿಯುವ ನೀರು ಒದಗಿಸುವಲ್ಲಿ ಎಡವಿದೆ. ಈ ಚುನಾವಣೆಯಲ್ಲಿ ಕೈಗೆ ಅಧಿಕಾರ ಕೊಟ್ಟರೆ ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವುದೇ ನನ್ನ ಮೊದಲ ಗುರಿಯಾಗಿದೆ ಎಂದು ಹೇಳಿದರು.
ಹಲವು ದಶಕಗಳಿಂದ ತಪಸ್ಸು ಮಾಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಅಧಿಕಾರವನ್ನು ಸದ್ಬಳಕೆ ಮಾಡಿಕೊಳ್ಳದೆ ದುರ್ಬಳಕೆ ಮಾಡಿಕೊಂಡು ಮುಖ್ಯಮಂತ್ರಿಯಿಂದ ಹಿಡಿದು ಸಾಲು ಸಾಲಾಗಿ ಸಚಿವರು ಜೈಲು ಸೇರಿ ರಾಜ್ಯದ ಮಾನವನ್ನು ಮೂರು ಕಾಸಿಗೆ ಹರಾಜು ಹಾಕಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ನಮ್ಮ ರಾಜ್ಯಕ್ಕೆ ಬೇಕೆ ಎಂಬ ಬಗ್ಗೆ ಯುವಕರು ಚಿಂತನೆ ಮಾಡಬೇಕು ಎಂದರಲ್ಲದೆ ಬಿಜೆಪಿಗೆ ರಾಜ್ಯದಿಂದ ಗೇಟ್‌ಪಾಸ್ ನೀಡಬೇಕು, ಉತ್ತಮ ಆಡಳಿತ ನೀಡುವ ಸಾಮರ್ಥ್ಯವಿರುವುದು ಕಾಂಗ್ರೆಸ್‌ಗೆ ಮಾತ್ರ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದು ಭವಿಷ್ಯ ನುಡಿದರು.
ಸರ್ಕಾರ ಮಾಡಬೇಕಿದ್ದ ಹಲವು ಗಂಭೀರ ಸಮಸ್ಯೆಗಳನ್ನು ನಾನು ನನ್ನ ಟ್ರಸ್ಟ್ ವತಿಯಿಂದ ಮಾಡಿರುವೆ ನನ್ನ ಸಮಾಜ ಸೇವೆ ನಿರಂತರವಾಗಿ ಮುಂದುವರೆಯಲು ಕಾರ್ಯಕರ್ತರು ಹಳ್ಳಿಗಳಲ್ಲಿ ಹಗಲಿರುಳು ವ್ಯಾಪಕ ಪ್ರಚಾರ ಮಾಡಬೇಕೆಂದು ಕೋರಿದರು. ಪ್ರಚಾರ ಸಮಿತಿ ಅಧ್ಯಕ್ಷ ಕೆ. ಚಂದ್ರಾರೆಡ್ಡಿ, ಬ್ಲಾಕ್ ಅಧ್ಯಕ್ಷರಾದ ಪಾರ್ಥಸಾರಥಿ, ಮಂಜುನಾಥ್,ಬಿ. ಹೊಸರಾಯಪ್ಪ, ಎಸ್.ಎಂ. ಗೋಪಾಲ್, ವೆಂಕಟರಾಮಯ್ಯ, ಕೇತಗಾನಹಳ್ಳಿ ಗೋವಿಂದರಾಜು, ಮುನಿಸ್ವಾಮಿ, ಬಾಲಪ್ಪ, ರತ್ನಪ್ಪ, ವೆಂಕಟೇಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ