ಕೋಲಾರ

ಅಭಿವೃದ್ಧಿಯೇ ಬಿಜೆಪಿ ಗೆಲವಿಗೆ ಮಂತ್ರ: ಶಾಸಕ ಕೃಷ್ಣಯ್ಯಶೆಟ್ಟಿ

ಮಾಲೂರು: ಐದು ವರ್ಷದ ಬಿಜೆಪಿ ಆಡಳಿತದಲ್ಲಿ ರಾಜ್ಯದ ಪ್ರತಿ ತಾಲೂಕನ್ನು ಅಭಿವೃದ್ಧಿಗೊಳಿಸಿದ್ದು, ಅದುವೇ ಬಿಜೆಪಿ ಗೆಲವಿಗೆ ರಕ್ಷೆಯಾಗಲಿದೆ ಎಂದು ಶಾಸಕ ಕೃಷ್ಣಯ್ಯಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಅವರು ತಾಲೂಕಿನ ಜಯಮಂಗಲದಲ್ಲಿ ಏರ್ಪಡಿಸಿದ್ದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನೆತೆಯ ಋಣ ತೀರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿ ದ್ದು, ಶೈಕ್ಷಣಿಕವಾಗಿ, ಸ್ವಾವಲಂಬಿಯಾಗಿ ಹಾಗೂ ಆರೋಗ್ಯವಾಗಿ ಅಭಿವೃದ್ಧಿ ಹೊಂದಲು ಸರ್ಕಾರದಿಂದ ಮಾತ್ರವಲ್ಲದೆ, ತಮ್ಮ ಟ್ರಸ್ಟ್ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು. ಎಂಟು ವರ್ಷದಿಂದ ತಾಲೂಕಿನಲ್ಲಿ ಯಾವುದೇ ಗಲಾಟೆ-ಗಲಭೆಗಳಿಲ್ಲದೆ ಶಾಂತಿ ನೆಲಸಿದ್ದು, ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆರಿಸಬೇಕು ಎಂದು ಮನವಿ ಮಾಡಿದರು. ಇದೇ ಸಂಧರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ ಜಯಮಂಗಲ ಪಂಚಾಯ್ತಿಯ ಮಾಜಿ ಉಪಾಧ್ಯಕ್ಷೆ ರತ್ನಮ್ಮ, ವೆಂಕಟಸ್ವಾಮಿ, ಕರಗಪ್ಪ, ಅಶ್ವಥ್, ರಂಗನಾಥ್, ಶಿವಣ್ಣ ಮತ್ತಿತರರನ್ನು ಶಾಸಕ ಕೃಷ್ಣಯ್ಯ ಶೆಟ್ಟಿ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ನಾರಾಯಣಗೌಡ, ಮಧುಸೂಧನ್, ಶೇಷಗಿರಿ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!