ಕೋಲಾರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ: ಶಿಕ್ಷಣಾಧಿಕಾರಿ

ಕ.ಪ್ರ. ವಾರ್ತೆ ಮಾಲೂರು ಮಾ.30
ಸೋಮವಾರದಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಬ್ರಮಣ್ಯಂ ಹೇಳಿದರು.
 ಅವರು ತಮ್ಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ 1576 ಗಂಡು ಹಾಗೂ 1639 ಹೆಣ್ಣು ಮಕ್ಕಳು ಸೇರಿದಂತೆ ಒಟ್ಟು 3320 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇವರಲ್ಲಿ 105 ರಿಪೀಟರ್ಸ್ ಸಹ ಸೇರಿದ್ದಾರೆ ಎಂದು ತಿಳಿಸಿದರು.
ಪಟ್ಟಣದಲ್ಲಿ ಆರು ಕೇಂದ್ರಗಳು ಸೇರಿದಂತೆ ತಾಲೂಕಿನಲ್ಲಿ 10 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದ ಬಿಇಓ  ಪರೀಕ್ಷೆ ಕ್ರಮಬದ್ಧವಾಗಿ ನಡೆಯಲು ಜಾಗೃತ ಹಾಗೂ ಸ್ಥಾನಿಕ ಜಾಗೃತ ದಳ ರಚಿಸಲಾಗಿದೆ ಎಂದರು. 200 ಕೊಠಡಿ ಮೇಲ್ವಿಚಾರಕರಿಗೆ ಮುಖ್ಯ ಅಧೀಕ್ಷಕರಿಂದ ತರಬೇತಿ ನೀಡುಲಾಗುತ್ತಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ತಾಲೂಕಿನಲ್ಲಿ ಶೈಕ್ಷಣಿಕ ವಾತಾವರಣ ಉತ್ತಮವಾಗಿದೆ. ಕಳೆದ ಬಾರಿ ಶೇ.70 ರಷ್ಟಿದ್ದ ಫಲಿತಾಂಶವನ್ನು ಈ ಬಾರಿ 80-90 ಕ್ಕೆ ಹೆಚ್ಚಿಸಲು ಶತಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
ತಾಲೂಕಿನ ಮಾಸ್ತಿಯಲ್ಲಿ ಎರಡು, ಲಕ್ಕೂರು ಹಾಗೂ ಟೇಕಲ್‌ನಲ್ಲಿ ಒಂದು ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ವಿದ್ಯಾರ್ಥಿಗಳು ಇಲಾಖೆ ಸ್ಥಾಪಿಸಿರುವ ಸಹಾಯವಾಣಿ ಕೇಂದ್ರದಲ್ಲಿರುವ ನೋಡಲ್ ಅಧಿಕಾರಿಗಳಿಗೆ (9480695269)(9448702282) ಪೋನಾಯಿಸಿ ಸಹಾಯ ಪಡೆಯುವಂತೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!