ಕೋಲಾರ

ನಜೀರ್‌ಗೆ ಟಿಕೆಟ್: ನಾಳೆ ನಿರ್ಧಾರ

ಕೋಲಾರ: ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇತ್ತೀಚೆಗೆ ನಡೆದ ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಒಮ್ಮತದಿಂದ ಆಯ್ಕೆಯಾಗಿರುವ ವಿಧಾನಪರಿಷತ್ ಸದಸ್ಯ ನಜೀರ್ ಅಹಮ್ಮದ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ವಿಧಾನ ಪರಿಷತ್ ಮತ್ತು ಸಂಸದರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ಚುನಾವಣಾ ಸಮಿತಿಯು ಪಕ್ಷದ ಅಧ್ಯಕ್ಷೆ ಸೋನಿಯಾ ಅವರಿಗೆ ಅಧಿಕಾರ ನೀಡಿದ್ದು ಶನಿವಾರ ನಡೆದ ಅಭ್ಯರ್ಥಿಗಳ ಪಟ್ಟಿ ಪರಿಶೀಲನಾ ಸಭೆಯಲ್ಲಿ ಚುನಾವಣಾ ಸಮಿತಿಯುವ ನಜೀರ್ ಅಹಮ್ಮದ್ ಅವರ ಹೆಸರು ಶಿಫಾರಸ್ಸು ಮಾಡಿದೆಯಾದರೂ ಟಿಕೆಟ್ ನೀಡುವ ವಿಚಾರದಲ್ಲಿ ಸೋನಿಯಾ ಅವರ ನಿರ್ಧಾರವೇ ಅಂತಿಮವಾಗಿರುವುದರಿಂದ ಸೋಮವಾರ ಕೋಲಾರ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಸಿಗುತ್ತದೆ ಎಂಬುದು ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ. ಟಿಕೆಟ್ ಖಚಿತವಾಗದಿರುವುದರಿಂದಲೇ ನಜೀರ್ ಅಹಮ್ಮದ್ ಚುನಾವಣಾ ಪ್ರಚಾರ ಕಾರ್ಯ ಇನ್ನು ಆರಂಭಿಸಿಲ್ಲ, ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸಹ ನಜೀರ್ ಪರವಾಗಿ ಲಾಬಿ ಮಾಡುತ್ತಿದ್ದು ಸೋಮವಾರ ಟಿಕೆಟ್ ಸಿಕ್ಕಿದ ಬಳಿಕ ಕೋಲಾರದಲ್ಲಿ ಮತ್ತೊಂದು ಸಭೆ ನಡೆಸಿ ಪ್ರಚಾರಕ್ಕೆ ಚಾಲನೆ ನೀಡಲಾಗುವುದೆನ್ನಲಾಗಿದೆ.
ಇಂದು ಜಾಗೃತಿ ಸಮಾವೇಶ
ಕೋಲಾರ: ಶ್ರೀರಾಮ ಸೇನೆ ವತಿಯಿಂದ ಹಿಂದೂ ಯುವ ಜಾಗೃತಿ ಸಮಾವೇಶವನ್ನು ತಾಲೂಕಿನ ವೇಮಗಲ್‌ಣ ನ ಕಣಷ್ಣಾನಂದ ಕಲ್ಯಾಣ ಮಂಟಪದಲ್ಲಿ ಮಾ. 31 ರ ಮಧ್ಯಾಹ್ನ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ. ವೇಮಗಲ್‌ನ ಶ್ರೀ ಕೃಷ್ಣಾನಂದ ಸ್ವಾಮೀಜಿ, ಹಿರಿಯ ಮುಖಂಡ ಡಿ.ಆರ್. ನಾಗರಾಜ್, ಯುವ ಮುಖಂಡರಾದ ಚಲಪತಿ, ಪ್ರವೀಣ್‌ಕುಮಾರ್, ಬೆಂಗಳೂರಿನ ಶ್ರೀರಾಮ ಸೇನೆಯ ಅಧ್ಯಕ್ಷ ಶಿವಕುಮಾರೆ ರೆಡ್ಡಿ, ಜಿಲ್ಲಾ ಅಧ್ಯಕ್ಷ ಪ್ರವೀಣ್‌ಕುಮಾರ್ ಭಾಗವಹಿಸಲಿದ್ದಾರೆ ಎಂದು ಗ್ರಾಮಾಂತರ ಅಧ್ಯಕ್ಷ ಪುನೀತ್‌ಗೌಡ ತಿಳಿಸಿದ್ದಾರೆ.
ಕುಡಿವ ನೀರಿಗೆ ಪರದಾಟ
ಶ್ರೀನಿವಾಸಪುರ: ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆ ಪಟ್ಟಣದಲ್ಲಿ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಉಂಟಾಗಿದ್ದು, ಪುರಸಭೆ ಅಧಿಕಾರಿಗಳು ನೀರು ನಿರ್ವಹಣೆಯಲ್ಲಿ ತಾರತಮ್ಯ ಎಸಗುತ್ತಿದ್ದಾರೆ ಎಂದು ನಾಗರಿಕರು ಆರೋಪಿಸಿದ್ದಾರೆ.ದಿನದಿಂದ ದಿನಕ್ಕೆ ಬಿಸಿಲಿನ ತಾಪ ಜಾಸ್ತಿಯಾಗಿ ಜನ ಕುಡಿಯುವ ನೀರಿಗಾಗಿ ಹಾಹಾಕಾರ ಪಡುತ್ತಿದ್ದರೂ ಕೇಳುವವರಿಲ್ಲ. ಸಂಬಂಧಪಟ್ಟ ಮೇಲಾಧಿಕಾರಿಗಳು ಇತ್ತ ಗಮನ ಹರಿಸದಿದ್ದ ಪಕ್ಷದಲ್ಲಿ ಪುರಸಭೆ ಎದುರು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ