ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನರ್ಮ್ ಯೋಜನೆ ಕುರಿತು ಸಭೆ ಇಂದು

Rashmi Kasaragodu
Updated On : 5 Nov 2013, 12:43 pm

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೋಲಾರ ವಿಭಾಗದ ವತಿಯಿಂದ ನಗರದಲ್ಲಿ ಹೆಚ್ಚುವರಿಯಾಗಿ ನಗರ ಸಾರಿಗೆಯನ್ನು ಕಾರ್ಯಾಚರಣೆ ಮಾಡಲು ಕೇಂದ್ರ ಸರ್ಕಾರದ ನರ್ಮ್ ಯೋಜನೆಯಡಿ 50 ವಾಹನಗಳು ಮಂಜೂರಾಗಿದ್ದು ಕೇಂದ್ರ ಸರ್ಕಾರಕ್ಕೆ ನಗರ ಸಾರಿಗೆ ಕಾರ್ಯಾಚರಣೆ ಕುರಿತಾದ ಸಂಪೂರ್ಣ ಮಾಹಿತಿಯನ್ನು ಕಳುಹಿಸಿಕೊಡಬೇಕಾದ ಹಿನ್ನೆಲೆಯಲ್ಲಿ ಕೋಲಾರದ ಜನತೆಗೆ ಉಪಯೋಗವಾಗುವಂತಹ ಮಾರ್ಗಗಳನ್ನು ಗುರುತಿಸಲು ಹಾಗೂ ಬಸ್ ತಂಗುದಾಣ ನಿರ್ಮಿಸುವ ಬಗ್ಗೆ ನ.5 ರಂದು ಮಧ್ಯಾಹ್ನ 3 ಗಂಟೆಗೆ ಡಿಸಿ ಕಚೇರಿಯಲ್ಲಿ ಸಭೆಯನ್ನು ಕರೆಯಲಾಗಿದೆ. ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಗೆ ಆಗಮಿಸಿ ಸೂಕ್ತವಾದ ಸಲಹೆ ನೀಡಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಎಲ್ಲೋಡಿಗೆ ಡಿಸಿ ಭೇಟಿ ಕಾಮಗಾರಿ ಪರಿಶೀಲನೆ
ಗುಡಿಬಂಡೆ: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಸೋಮವಾರ ತಾಲೂಕಿನ ಎಲ್ಲೋಡು ಗ್ರಾಮಕ್ಕೆ ಅನಿರೀಕ್ಷಿತ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮೊದಲಿಗೆ ತಾಲೂಕಿನ ಪುರಾಣ ಪ್ರಸಿದ್ಧ ದೇವಾಲಯವಾದ ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಅವರು ದೇವಾಲಯದ ನಿರ್ವಹಣೆ ಮತ್ತಿತರ ವಿಚಾರಗಳ ಬಗ್ಗೆ ತಹಸೀಲ್ದಾರ್ ಶೈಲಜಾರವರಿಂದ ಮಾಹಿತ ಪಡೆದರು. ನಂತರ ನಿರ್ಮಿತಿ ಕೇಂದ್ರದ ವತಿಯಿಂದ ಗ್ರಾಮದಲ್ಲಿ ನಿರ್ಮಿಸುತ್ತಿರುವ ಶಾಲಾ ಕಟ್ಟಡ ಕಾಮಗಾರಿ ವೀಕ್ಷಿಸಿದರು. ಬಳಿಕ ತಾಲೂಕಿನ ಕೊಂಡಾವಲಹಳ್ಳಿ ಗ್ರಾಮದ ಬಳಿ ಬಸ್ ಡಿಪೋ ಹಾಗೂ ನಿವೇಶನರಹಿತರಿಗಾಗಿ ಉಚಿತ ನಿವೇಶನ ನೀಡಲು ಮೀಸಲಿಟ್ಟಿರುವ ಸ್ಥಳದ ಪರಿಶೀಲನೆ ನಡೆಸಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಕ್ರೀಡಾಂಗಣಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರಿಗೆ ಸೂಚಿಸಿದರು. ಒಟ್ಟಿನಲ್ಲಿ ದೀಪಾವಳಿ ಪ್ರಯುಕ್ತ ಸೋಮವಾರ ಸರ್ಕಾರಿ ರಜೆಯಿದ್ದರೂ ಜಿಲ್ಲಾಧಿಕಾರಿಗಳ ಆಗಮನ ತಾಲೂಕು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದು ವಿಶೇಷವಾಗಿತ್ತು.
ದವಸ ಧಾನ್ಯ ಕೊಡುಗೆ
ಮುಳಬಾಗಲು: ದಾನಿಗಳಿಂದ ದಾವಸ ಧಾನ್ಯ ಸಂಗ್ರಹಿಸಿ ಶಬರಿಮಲೆಯಲ್ಲಿ ನಡೆಯುವ ಅನ್ನದಾನ ಕಾರ್ಯಕ್ರಮಕ್ಕೆ ಸರಬರಾಜು ಮಾಡುವ ಕಾರ್ಯಕ್ರಮವನ್ನು ಪಟ್ಟಣದಲ್ಲಿ ನ.9ರಂದು ಅಖಿಲ ಭಾರತ ಅಯ್ಯಪ್ಪ ಸೇವಾಸಮಿತಿ ಹಮ್ಮಿಕೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ್ರೀನಿವಾಸಪುರ ತಾಲೂಕು ರಾಯಲಪಾಡು ಕಾಶಿ ವಿಶ್ವನಾಥ ದೇವಾಲಯದ ವೆಲ್ಲಾಲ ಸತ್ಯನಾರಾಯಣ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಅಯ್ಯಪ್ಪ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಕೆ.ಕೆ.ಪಣೆಕ್ಕರ್, ತಹಸೀಲ್ದಾರ್ ಡಿ.ವಿ.ರಾಮಮೂರ್ತಿ, ಡಿವೈಎಸ್ಪಿ ಟೆ.ಸಿದ್ದಪ್ಪ, ಅಶೋಕ್‌ಕುಮಾರ್ ಮತ್ತಿತರರು ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement