ಬಸ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು
ಚಿಂತಾಮಣಿ: ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಬ್ಬನು ಮೃತಪಟ್ಟು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಸಂದ್ರ ಬಳಿ ನಡೆದಿದೆ. ಚಿಂತಾಮಣಿ -ಬೆಂಗಳೂರು ಮುಖ್ಯ ರಸ್ತೆಯ ಮಾರ್ಗವಾಗಿ ಪಟ್ಟಣದಲ್ಲಿನ ಆದರ್ಶ ಚಿತ್ರಮಂದಿರ ಬಳಿ ಇರುವ ಡಾ.ಬಿ.ಆರ್. ಅಂಬೇಡ್ಕರ್ ಕಾಲೋನಿ ನಿವಾಸಿ ಕುಲದೀಪ್ (20)ಎಂಬಾತನು ಅಪಘಾತದಲ್ಲಿ ಮೃತಪಟ್ಟಿರುವ ಯುವಕನೆಂದು ಪೊಲೀಸರು ತಿಳಿಸಿದ್ದಾರೆ. ಮತ್ತಿಬ್ಬರು ತೀವ್ರ ಗಾಯಗಳಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲಿಸಿ ನಂತರ ವಾಹನಗಳನ್ನು ವಶಕ್ಕೆ ಪಡೆದು ಕೇಸು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.