ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೆಸ್ಕಾಂ ನೌಕರನ ದ್ವಿಚಕ್ರ ವಾಹನ ಕಳವು

Rashmi Kasaragodu
Updated On : 5 Nov 2013, 12:42 pm

ಕೆಜಿಎಫ್: ಟ್ರಾನ್ಸ್‌ಫಾರ್ಮರ್ ದುರಸ್ತಿಗೊಳಿಸುತ್ತಿದ್ದ ಬೆಸ್ಕಾಂ ಇಲಾಖೆಯ ನೌಕರರೊಬ್ಬರ ದ್ವಿಚಕ್ರ ವಾಹನವನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಗಾಂಪೇಟೆ ನಿವಾಸಿ ಏಳುಮಲೈ ಎಂಬುವರು ದಿನಾಂಕ 30-10-2013 ರಂದು ನಗರದ ಪ್ರಿಯಾಬಾರ್ ಪಕ್ಕದಲ್ಲಿರುವ ಟ್ರಾನ್ಸ್‌ಫಾರ್ಮರನ್ನು ಪರಿಶೀಲಿಸಿ ನಂತರ ಅಲ್ಲಿಂದ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ತಮ್ಮ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಲೈನ್ ಚೆಕ್ ಮಾಡಲು ಹೋಗಿದ್ದು ಅರ್ಧ ಗಂಟೆಯ ನಂತರ ಬಂದು ನೋಡಿದಾಗ ದ್ವಿಚಕ್ರ ವಾಹನ ನಾಪತ್ತೆಯಾಗಿತ್ತು.
ಯಾರೋ ಪರಿಚಯ ವಿರುವ ವ್ಯಕ್ತಿಗಳು ತೆಗೆದುಕೊಂಡು ಹೋಗಿರಬಹುದು ಎಂದು ಎಲ್ಲಾ ಕಡೆ ಹುಡುಕಿದರೂ ಪತ್ತೆಯಾಗದ ಕಾರಣ ಯಾರೋ ಕಳ್ಳರು ತಮ್ಮ 26 ಸಾವಿರ ಬೆಲೆ ಬಾಳುವ ದ್ವಿಚಕ್ರ ವಾಹನವನ್ನು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ಏಳುಮಲೈ ಅವರು ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement