ರಕ್ತದಾನ ಶಿಬಿರ
ಗುಡಿಬಂಡೆ: ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ನ.8 ರಂದು ಭಾರತೀಯ ರೆಡ್ಕ್ರಾಸ್ ಸಂಸ್ಥೆ, ಮಾಜಿ ಸೈನಿಕರ ಸಂಘ ಹಾಗೂ ಸ್ಥಳೀಯ ಉನ್ನತಿ ಮಾನವ ಹಕ್ಕುಗಳ ರಕ್ಷಣಾ ಸಂಘದ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ಮಾಜಿ ಸೈನಿಕರ ಸಂಘದ ಅಧ್ಯಕ್ಷ ದಿ.ಚೌಡಪ್ಪ ಸ್ಮರಣಾರ್ಥ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.