ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ಸಾಂಸ್ಕೃತಿಕ ಸ್ಪರ್ಧೆ

Rashmi Kasaragodu
Updated On : 7 Nov 2013, 12:54 pm

ಕೋಲಾರ: ಪದವಿ ಪೂರ್ವ ಶಿಕ್ಷಣ ಇಲಾಖೆ ಕೋಲಾರ ಮತ್ತು ನೂತನ ಪದವಿ ಪೂರ್ವ ಕಾಲೇಜು ಕೋಲಾರ ಸಂಯುಕ್ತಾಶ್ರಯದಲ್ಲಿ ನಗರದ ನೂತನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ವರ್ಧೆಗಳನ್ನು ನ. 7 ರಂದು ಗುರುವಾರ ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಜಿ. ದೊರೆಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ನೂತನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ಗಾಯತ್ರಿರೆಡ್ಡಿ ಅಧ್ಯಕ್ಷತೆ ವಹಿಸುವರು. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವರದರಾಜು, ಸರ್ಕಾರಿ ಬಾಲಕರ ಕಾಲೇಜಿನ ಪ್ರಾಂಶುಪಾಲ ಎಸ್. ವೆಂಕಟಸ್ವಾಮಿ, ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ.ಕೆ.ನಟರಾಜ್, ಕಸಾಪ ಜಿಲ್ಲಾಧ್ಯಕ್ಷ ಜೆ.ಜಿ. ನಾಗರಾಜ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗಣೇಶ್ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement