ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಚಿಕ್ಕಬಳ್ಳಾಪುರದಲ್ಲಿ...

Rashmi Kasaragodu
Updated On : 7 Nov 2013, 12:55 pm

ಚಿಕ್ಕಬಳ್ಳಾಪುರ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರಮೋದಿ ನೇತೃತ್ವದಲ್ಲಿ ನ.7 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಭಾರತವನ್ನು ಗೆಲ್ಲಿಸಿ ಬೃಹತ್ ಸಮಾವೇಶದ ಟಿಕೆಟ್ಗಳು ನಗರದಲ್ಲಿ ಭರ್ಜರಿಯಾಗಿ ಮಾರಾಟವಾದವು.
ನಗರದ ಹಳೆಯ ಬಸ್ ನಿಲ್ದಾಣದಲ್ಲಿ ಬಿಜೆಪಿ ಮುಖಂಡರು ಬುಧವಾರ ಟಿಕೆಟ್ ಮಾರಾಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಘೋಷಣೆಗಳೊಂದಿಗೆ ಹುರಿದುಂಬಿಸಿ 10 ರು.ಗಳ ಟಿಕೆಟ್ ಪಡೆದು ಭಾರತವನ್ನು ಗೆಲ್ಲಿಸಿ ರ್ಯಾಲಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ದೇಶದಲ್ಲಿ ಭಯೋತ್ಪಾದನೆ, ಭ್ರಷ್ಟಾಚಾರ, ಹದಗೆಟ್ಟ ಆರ್ಥಿಕ ವ್ಯವಸ್ಥೆ ಸೇರಿದಂತೆ ನಾನಾ ಸಮಸ್ಯೆಗಳು ತುಂಬಿ ತುಳುಕಾಡುತ್ತ ಅಭಿವೃದ್ಧಿಯಲ್ಲಿ ಹಿನ್ನಡೆ ಕಂಡು ಬರುತ್ತಿದೆ. ಹೀಗಿದ್ದರೂ ಕೇಂದ್ರದ ಯುಪಿಎ ಸರ್ಕಾರ ದೇಶದ ಅಭಿವೃದ್ಧಿಗೆ ಶ್ರಮಿಸುವಲ್ಲಿ ವಿಫಲವಾಗಿದೆ. ಉತ್ತಮ ಆಡಳಿತ ನೀಡಲು ಸಾಧ್ಯವಾಗದೇ ಕೇವಲ ಭರವಸೆಗಳಲ್ಲಿ ಅಭಿವೃದ್ಧಿ ಮಂತ್ರದ ಜಪ ಮಾಡುತ್ತಿದೆ ಎಂದು ಟೀಕಿಸಿದರು.
ಪ್ರಸ್ತುತ ದೇಶದಲ್ಲಿ ನರೇಂದ್ರ ಮೋದಿಯವರ ಪರ ಜನರು ಹೆಚ್ಚಿಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಗುಜರಾತಿನಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ರಾಷ್ಟ್ರೀಯ ಮಟ್ಟದಲ್ಲೂ ಹಮ್ಮಿಕೊಳ್ಳಬೇಕು. ಭಾರತ ದೇಶ ಭಯೋತ್ಪಾದನೆ ಮತ್ತು ಭ್ರಷ್ಟಾಚಾರದಿಂದ ಮುಕ್ತರಾಗಬೇಕೆಂಬ ಆಶಯವನ್ನು ಹೊಂದಿದ್ದಾರೆ. ಈ ನಿಟ್ಟಿನಲ್ಲಿ ನರೇಂದ್ರ ಮೋದಿಯವರೇ ಏಕೈಕ ಪರಿಹಾರ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜನರು ದೇಶದ ಸಮಸ್ಯೆಗಳನ್ನು ದೂರ ಮಾಡುವ ಸಲುವಾಗಿ ನರೇಂದ್ರಮೋದಿಯವರ ಕೈ ಬಲಪಡಿಸಬೇಕು. ಅವರನ್ನು ಪ್ರಧಾನಿಯನ್ನಾಗಿಸಿ ದೇಶದ ಪ್ರಗತಿಗೆ ಸಹಕರಿಸಬೇಕೆಂದ ಅವರು, ಬೆಂಗಳೂರಿನಲ್ಲಿ ನ.17 ರಂದು ಬೃಹತ್ ಸಮಾವೇಶ ನಡೆಯುತ್ತಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಅಗಲಗುರ್ಕಿ ಚಂದ್ರಶೇಖರ್, ಲಕ್ಷ್ಮೀನಾರಾಯಣಗುಪ್ತ, ಶ್ರೀಕಾಂತ್ ಭಟ್, ವೆಂಕಟೇಶ್ ಪ್ರಸಾದ್, ಭಾರತಿ, ಪ್ರೇಮಲೀಲಾ ವೆಂಕಟೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement