ನೂತನ ಪ್ಯಾಸೆಂಜರ್ ರೈಲಿಗೆ ಚಾಲನೆ ಇಂದು
ಕೋಲಾರ: ಬೆಂಗಳೂರು-ಚಿಕ್ಕಬಳ್ಳಾಪುರ-ಕೋಲಾರ(76551/52) ನಡುವಿನ ನೂತನ ಪ್ಯಾಸೆಂಜರ್ ರೈಲು ಸಂಚಾರಕ್ಕೆ ನ.8 ರಂದು ಮಧ್ಯಾಹ್ನ 1.30 ಗಂಟೆಗೆ ಕೋಲಾರ ರೇಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಲಾಗುತ್ತಿದೆ. ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ರೈಲಿಗೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಡಾ.ಎಂ.ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ ಭಾಗವಹಿಸುವರು. ಕೋಲಾರ-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಒಟ್ಟು 10 ರೈಲು ನಿಲ್ದಾಣಗಳಿದ್ದು ಪ್ಯಾಸೆಂಜರ್ ರೈಲು ಚಿಕ್ಕಬಳ್ಳಾಪುರದಿಂದ ಭಾನುವಾರ ಹೊರತುಪಡಿಸಿ ಇನ್ನುಳಿದಂತೆ ಮಧ್ಯಾಹ್ನ 1 ಗಂಟೆಗೆ ಕೋಲಾರಕ್ಕೆ ಆಗಮಿಸಿ ಮತ್ತೆ 1.45ಕ್ಕೆ ಬೆಂಗಳೂರಿಗೆ ಹೊರಡಲಿದೆ.