ಪ್ರಧಾನ ಕಾರ್ಯದರ್ಶಿ ನೇಮಕ
ಶ್ರೀನಿವಾಸಪುರ: ಸ್ಥಳೀಯ ಪುರಸಭೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನವೀನ್ ಚಂದ್ರರವರು ರಾಜ್ಯ ಪೌರ ಸೇವಾ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದಕ್ಕೆ ಸಹಕರಿಸಿದ ಸಂಘದ ರಾಜ್ಯ ಸಲಹೆಗಾರ ಎನ್. ವೆಂಕಟೇಶಪ್ಪ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಅವರು ಕೃತಜ್ಞತೆ ಅರ್ಪಿಸಿದ್ದಾರೆ.