ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೈತರ ಅಧ್ಯಯನ ಪ್ರವಾಸಕ್ಕೆ ಚಾಲನೆ

Rashmi Kasaragodu
Updated On : 8 Nov 2013, 1:09 am

ಗೌರಿಬಿದನೂರು: ಕೃಷಿ ಚಟುವಟಿಕೆ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವುದನ್ನು ರೈತರು ಸದುಪಯೋಗಪಡಿಸಿಕೊಂಡು ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಬೇಕೆಂದು ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ತಿಳಿಸಿದರು.
ಪಟ್ಟಣದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ರೈತರ ಅಧ್ಯಯನ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ, ವೈಜ್ಞಾನಿಕ ತಂತ್ರಜ್ಞಾನ ಬೆಳೆದಂತೆ ಕೃಷಿ ಕ್ಷೇತ್ರದಲ್ಲಿ ಹೆಚ್ಚಿಗೆ ಬೆಳವಣಿಗೆಗಳು ಆಗುತ್ತಿವೆ. ಹೊಸ ವಿಧಾನಗಳನ್ನು ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಇವುಗಳ ಬಗ್ಗೆ ಕಾಲ ಕಾಲಕ್ಕೆ ರೈತರು ತಿಳಿದುಕೊಳ್ಳಬೇಕು ಎಂದರು. ಜಿಪಂ ಸದಸ್ಯ ಕೇಶವರೆಡ್ಡಿ, ಪ್ರಕಾಶ್ರೆಡ್ಡಿ, ಬೊಮ್ಮಣ್ಣ, ಹನುಮಂತರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement