ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕನಕ ಜಯಂತಿ; ಪೂರ್ವಭಾವಿ ಸಭೆ

Rashmi Kasaragodu
Updated On : 10 Nov 2013, 12:25 pm

ಶಿಡ್ಲಘಟ್ಟ: ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲ ಇಲಾಖಾಧಿಕಾರಿಗಳು ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮನವಿ ಮಾಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ ಕನಕ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಪಟ್ಟಣದ ಪುರಸಭೆ ಮುಂಭಾಗದಲ್ಲಿ ಕನಕದಾಸರ ಭಾವಚಿತ್ರವನ್ನು ತೇರಿನಲ್ಲಿ ಕುಳ್ಳರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ತಂದು ತಾಲೂಕು ಕಚೇರಿ ಮುಂಭಾಗ ಸಮಾರಂಭ ಆಯೋಜಿಸಲಾಗುತ್ತದೆ ಎಂದರು. ಸಮಾಜದ ಮುಖಂಡ ನಾಗರಾಜ್, ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಸಲಹೆ ನೀಡಿದರು. ದೇವರಾಜಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಚನ್ನರಾಯಪ್ಪ, ಗಣೇಶಪ್ಪ, ನಾರಾಯಣಸ್ವಾಮಿ, ಮುನಿಮಲ್ಲಪ್ಪ, ರಾಮಾಂಜಿ ಇದ್ದರು.
ಕೌಟುಂಬಿಕ ಕಲಹ; ಗೃಹಿಣಿ ಆತ್ಮಹತ್ಯೆ
ಗುಡಿಬಂಡೆ: ಬೆಂಕಿ ಹಚ್ಚಿಕೊಂಡು ಗೃಹಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚೌಟಕುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಭಾಗ್ಯಮ್ಮ (42) ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಂಚಿಕೊಂಡು ಮೃತಪಟ್ಟಿರುವ ಮಹಿಳೆ. ಇವರ ಗಂಡ ಕುಡಿತದ ಚಟ ಹೊಂದಿದ್ದರಿಂದ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ಭಾಗ್ಯಮ್ಮ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement