ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕನಕ ಜಯಂತಿ; ಪೂರ್ವಭಾವಿ ಸಭೆ

Rashmi Kasaragodu
Updated On : 10 Nov 2013, 12:25 pm

ಚಿಂತಾಮಣಿ: ಕನಕ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕೆಂದು ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಕೋರಿದರು. ಪಟ್ಟಣದ ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಕನಕ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಎಲ್ಲಾ ಸಂಘ ಸಂಸ್ಥೆಗಳು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು. ತಾಲೂಕು ದಂಡಾಧಿಕಾರಿ ಕೆ.ಟಿ. ಕೃಷ್ಣಸ್ವಾಮಿ ಮಾತನಾಡಿ, 20 ರಂದು ಕನಕದಾಸರ ಜಯಂತಿ ಅದ್ಧೂರಿಯಾಗಿ ಆಚರಿಸಲು ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ತಬ್ದ ಚಿತ್ರಗಳನ್ನು ಹಾಗೂ ಕಚೆರಿ ಮುಂಭಾಗದಲ್ಲಿ ದೀಪಾಲಂಕಾರ ಸೇರಿದಂತೆ ಪೂರ್ವ ಸಿದ್ಧತೆಗಳ ಬಗ್ಗೆ ಮಾತನಾಡಿದರು. ವೃತ್ತ ನಿರೀಕ್ಷಕ ನಂಜಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ, ಬಿಸಿಎಂ ಅಧಿಕಾರಿ ಖಾಜಿ, ನಗರಸಭೆ ಆಯುಕ್ತ ಚನ್ನೇಗೌಡ, ಡಿ. ಸಾದಪ್ಪ, ನಟರಾಜ್, ವೆಂಕಟರವಣಪ್ಪ, ಚಂದ್ರಶೇಖರ್, ಮಂಜುನಾಥ್, ಕೋನಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement