ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕ್ಷೇತ್ರದ ಗ್ರಾಮಗಳ ಅಭಿವೃದ್ಧಿ: ಸರ್ಕಾರಕ್ಕೆ ಪ್ರಸ್ತಾವನೆ

Rashmi Kasaragodu
Updated On : 10 Nov 2013, 12:26 pm

ಕೆಜಿಎಫ್: ಕೆಜಿಎಫ್ ಕ್ಷೇತ್ರದ ಗಡಿ ಪ್ರದೇಶ ಗ್ರಾಮಗಳಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಸಂಪರ್ಕ ರಸ್ತೆಗಳ ಅಭಿವೃದ್ಧಿ, ಮೂಲ ಸೌಕರ್ಯ ಯೋಜನೆ ಜಾರಿಯಾಗಿದ್ದು ಗ್ರಾಮೀಣ ಭಾಗದಲ್ಲಿ ಎಲ್ಲಾ ವರ್ಗದವರಿಗೆ ಅನುಕೂಲವಾಗುವ ರೀತಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಶಾಸಕಿ ವೈ.ರಾಮಕ್ಕ ಹೇಳಿದರು.
ಘಟ್ಟಮಾದಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 32 ಲಕ್ಷ ವೆಚ್ಚದ ರಸ್ತೆಗಳ ಅಭಿವೃದ್ಧಿ ಹಾಗೂ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗಡಿಭಾಗದ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ತಾವು ಶಾಸಕಿಯಾದ ನಂತರ ಜಿಪಂ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ಅದೇ ರೀತಿ ಚಂಬಾರಾಸನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 8 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ನೀರು ಸರಬರಾಜಿಗೆ ಚಾಲನೆ ನೀಡಿದ ಅವರು, ಗ್ರಾಮೀಣ ಭಾಗದಲ್ಲಿ 4ಗೆ 20 ಲೀಟರ್ ಶುದ್ಧ ಕುಡಿಯುವ ನೀರು ಕಲ್ಪಿಸುವ ಯೋಜನೆಯನ್ನು ಕ್ಷೇತ್ರದ 15 ಗ್ರಾಪಂ ವ್ಯಾಪ್ತಿಯಲ್ಲಿ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕ ವೈ.ಸಂಪಂಗಿ ಮಾತನಾಡಿ, ನಗರ ಭಾಗದೊಂದಿಗೆ ಗ್ರಾಮೀಣ ಭಾಗದಲ್ಲಿ ಮೂಲಸೌಲಭ್ಯದ ಅಭಿವೃದ್ಧಿಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ವೇಳೆ ಘಟ್ಟಮಾದಮಂಗಲ ಗ್ರಾಪಂ ವ್ಯಾಪ್ತಿಯ ಬಳ್ಳಗೆರೆ, ಕುರೂರು, ಕಾಲುವನಹಳ್ಳಿ, ಚಿಕಿಕಕಳ್ಳಹಳ್ಳಿ, ದೊಡ್ಡದಲ್ಲಿಹಳ್ಳಿ, ಚಂಬಾರಾಸನಹಳ್ಳಿ, ತಿರುಮಲಹಳ್ಳಿ ಭಾಗದಲ್ಲಿ 32 ಲಕ್ಷ ವೆಚ್ಚದಲ್ಲಿ ನೀರಿನ ಟ್ಯಾಂಕ್, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ಜಿಪಂ ಸದಸ್ಯೆ ನೀಮೌಲ್ಮೋಹನ್, ವಿಎಸ್ಎಸ್ಎನ್ ಅಧ್ಯಕ್ಷ ಮುನಿಸ್ವಾಮಿರೆಡ್ಡಿ, ಅಮರ್ನಾರಾಯಣರೆಡ್ಡಿ, ಗ್ರಾಪಂ ಸದಸ್ಯ ಬಾಬು, ಕೃಷ್ಣಮೂರ್ತಿ, ಮುಖಂಡರಾದ ವೆಂಕಟರಾಮರೆಡ್ಡಿ, ಮೌಲಾ, ಗೋಪಾಲ್, ದಶರಥರೆಡ್ಡಿ, ರಾಮಕೃಷ್ಣರೆಡ್ಡಿ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement