ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಡಿತರ ಚೀಟಿಗಳ ಅವ್ಯವಸ್ಥೆ ಸರಿಪಡಿಸಲು ಕ್ರಮ

Srinivasa Murthy VN
Updated On : 13 Nov 2013, 12:07 pm

ಟೇಕಲ್: ಮಾಲೂರು ತಾಲೂಕಿನಲ್ಲಿ ಪಡಿತರ ಚೀಟಿಗಳ ಅವ್ಯವಸ್ಥೆ ಸರಿಪಡಿಸಲು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಹೊಸ ಪಡಿತರ ಕಾರ್ಡ್ ನೀಡುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಾಸಕ ಕೆ.ಎಸ್. ಮಂಜುನಾಥಗೌಡ ತಿಳಿಸಿದರು.
ಟೇಕಲ್ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, 20 ದಿನಗಳೊಳಗಾಗಿ ಪಡಿತರ ಕಾರ್ಡ್‌ಗಳ ಸಮಸ್ಯೆ ನಿವಾರಿಸುವುದಾಗಿ ತಿಳಿಸಿದರು. ರಾಜಕೀಯ ತಾರತಮ್ಯವಿಲ್ಲದೆ ಹಂಚಿಕೆ ಮಾಡಲಾಗುವುದೆಂದು ತಿಳಿಸಿದರು.
ವಿವಿಧ ಕಾಮಗಾರಿಗಳ ಉದ್ಘಾಟನೆ: ಟೇಕಲ್ ತಾಪಂ ಸದಸ್ಯೆ ನಿರ್ಮಲ ಆಂಜಿನಪ್ಪರವರ ಅನುದಾನದಲ್ಲಿ 4 ಲಕ್ಷ ರುಪಾಯಿ ವೆಚ್ಚದ ಸಮುದಾಯ ಭವನಕ್ಕೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು. ದ್ರೌಪಧಾಂಬ ದೇವಾಲಯ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ 1.5 ಲಕ್ಷ ರುಪಾಯಿ, ಗ್ರಾಮದಲ್ಲಿ ಕುಡಿಯುವ ನೀರಿಗೆ ಪೈಪ್ ಲೈನ್, ಸಾಮೂಹಿಕ ಶೌಚಾಲಯ ನಿರ್ಮಿಸಲು ಶಾಸಕರ ನಿಧಿಯಿಂದ ಹಣ ನೀಡುವುದಾಗಿ ತಿಳಿಸಿದರು. ತಾಪಂ ಸದಸ್ಯೆ ನಿರ್ಮಲ ಆಂಜಿನಪ್ಪ, ಟೇಕಲ್ ಆಂಜಿನಪ್ಪ, ಬಿ.ಜಿ. ಮುನಿಶಾಮಿಗೌಡ, ಪ್ರಭಾಕರ್ ಶೆಟ್ಟಿ, ಗ್ರಾಪಂ ಸದಸ್ಯರಾದ ಟಿ.ಜಿ. ಸೀನಪ್ಪ, ಸಂಪಂಗಿರಾಮಯ್ಯಶೆಟ್ಟಿ, ಶ್ರೀನಿವಾಸ್, ಯಲ್ಲಪ ಮತ್ತಿತರರು ಇದ್ದರು.

ಸಿಸಿ ಕ್ಯಾಮರಾ ಅಳವಡಿಕೆ
ಕೆಜಿಎಫ್:
ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ತಡೆ ಮತ್ತು ಹೆಚ್ಚುತ್ತಿರುವ ವಾಹನ ಸಂಚಾರ ನಿಯಂತ್ರಿಸಲು ನಗರದ ಗಾಂಧಿ ವೃತ್ತ, ಸೂರಜ್‌ಮುಲ್ ವೃತ್ತ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರೋಹಿಣಿ ಕಟೋಚ್ ಸೆಫಟ್ ತಿಳಿಸಿದ್ದಾರೆ.
ಅವರ ನೇತೃತ್ವದಲ್ಲಿ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ವಾಹನ ಸಂಚಾರ ನಿಯಂತ್ರಿಸಲು ಸಾರ್ವಜನಿಕರಿಗೆ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು ಎಲ್ಲರೂ ಭಾಗವಹಿಸಿ ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಎಂ.ಜಿ. ಮಾರುಕಟ್ಟೆ ವರ್ತಕರ ಸಂಘ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಪೊಲೀಸ್ ಉಪರಕ್ಷಣಾಧಿಕಾರಿ ಎಚ್.ಪಿ. ರಾಜಣ್ಣ, ವೃತ್ತನಿರೀಕ್ಷಕ ಲಕ್ಷ್ಮೀನಾರಾಯಣ, ಸಿಎಸ್‌ಐಗಳಾದ ಎಲ್. ಆಂಜಪ್ಪ, ನಾರಾಯಣಸ್ವಾಮಿ, ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement