ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆಗೆ ಆಗ್ರಹ

Srinivasa Murthy VN
Updated On : 13 Nov 2013, 12:15 pm

ಚಿಕ್ಕಬಳ್ಳಾಪುರ: ಕಳೆದ ಕೆಲ ದಿನಗಳ ಹಿಂದೆ ತಾಲೂಕಿನ ವೀರದಿಮ್ಮಮ್ಮನ ಕಣಿವೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ನೇತ್ರಾ ಸಾವಿನ ಬಗ್ಗೆ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಿನಿ ವಿಧಾನಸೌಧಕ್ಕೆ ತೆರಳಿ ತಹಸೀಲ್ದಾರ್ ನಟೇಶ್ ಅವರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಮುಖಂಡ ಕುಂದಲಗುರ್ಕಿ ಮುನೀಂದ್ರ, ಪ್ರಭಾವಿಗಳ ಒತ್ತಡಕ್ಕೆ ಮಣಿದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಇದರ ಬಗ್ಗೆ ತನಿಖೆ ನಡೆಸಿ ನೇತ್ರಳ ಸಾವಿನ ಹಿಂದೆ ಇರುವ ರಹಸ್ಯವನ್ನು ಬಯಲು ಮಾಡಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯನ್ನು ನೀಡಬೇಕೆಂದು ಒತ್ತಾಯಿಸಿದರು.
ಪೊಲೀಸರು ಒತ್ತಡದಿಂದ ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿಕೊಂಡಿದ್ದಾರೆ. ಮೃತಳ ಶವಪರೀಕ್ಷೆಯನ್ನೂ ನಡೆಸಿಲ್ಲ ಎಂದು ಆರೋಪಿಸಿದ ಅವರು, ನೇತ್ರಾಳ ಸಾವಿನ ಬಗ್ಗೆ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ತಿಳಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್ ನಟೇಶ್, ಪ್ರಕರಣದ ತನಿಖೆ ನಡೆಸಿ ಸತ್ಯಾಂಶವನ್ನು ಹೊರಗೆಡಲಾಗುವುದು ಎಂದರು. ಪ್ರತಿಭಟನೆಯಲ್ಲಿ ಬಿ.ಎನ್. ಮುನಿಕೃಷ್ಣಪ್ಪ, ಮಧುಲತಾ, ಈಶ್ವರಪ್ಪ, ನಂದಿನಿ, ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement