ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೆಂಕಿ ಹಚ್ಚಿ ವಿದ್ಯಾರ್ಥಿ ಕೊಲೆ ಯತ್ನ

Srinivasa Murthy VN
Updated On : 14 Nov 2013, 1:08 am

ಕೋಲಾರ: ನಗರದ ಹೊರ ವಲಯದ ಟಮಕದಲ್ಲಿನ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ದೇವರಾಜ ಅರಸು ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಎಂಬಿಬಿಎಸ್ 9ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರುವ ಹೈದರಾಬಾದಿನ ಮೆಹಬೂಬ್ ನಗರದ ಕಾಮೇಶ್ವರ ಸಾಯಿ ಪ್ರಸಾದ್ ಅಪರಿಚಿತ ದುಷ್ಕರ್ಮಿಗಳಿಬ್ಬರ ದಾಳಿಗೆ ತುತ್ತಾಗಿ, ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.
ಘಟನೆ ವಿವರ: ದೇವರಾಜ ಅರಸು ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಕಾಮೇಶ್ವರ್ ಸಾಯಿ ಪ್ರಸಾದ್ ಎಸ್ಪಿ ಕಚೇರಿ ಸಮೀಪದ ಖಾಸಗಿ ಕಟ್ಟಡದಲ್ಲಿ ರೂಮ್ ಒಂದರಲ್ಲಿ ತನ್ನ ಗೆಳೆಯನೊಂದಿಗೆ ವಾಸವಾಗಿದ್ದ.
ಮಂಗಳವಾರ ರಾತ್ರಿ ಕಾಮೇಶ್ವರ್ ಹೊರಗೆ ಸುತ್ತಾಡಲು ಹೋಗಿದ್ದಾನೆ. ಆಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚಿನ್ನದ ಸರ ಕಿತ್ತುಕೊಂಡಿದ್ದಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಪ್ರಾಣ ಉಳಿಸಿಕೊಳ್ಳಲು ಆ ಸ್ಥಿತಿಯಲ್ಲೇ ಸಮೀಪದ ಮನೆಯೊಂದರ ಬಳಿ ಓಡಿ ಹೋಗಿ ಕೂಗಿಕೊಂಡಿದ್ದಾನೆ. ಆ ಮನೆಯವರು ಮತ್ತು ಸಾರ್ವಜನಿಕರು ಬೆಂಕಿ ನಂದಿಸಿ, ತಕ್ಷಣ ಆಲ್.ಎಲ್. ಜಾಲಪ್ಪ ಆಸ್ಪತ್ರೆಗೆ ಸೇರಿಸಿದ್ದಾರೆ. ಜಾಲಪ್ಪ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಮಂಗಳವಾರ ರಾತ್ರಿಯೇ ಸಾಗಿಸಲಾಗಿತ್ತು. ಗಲ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ತಂದೆ ಲಕ್ಷ್ಮಣ್ ಶರ್ಮ ಮತ್ತು ತಾಯಿ ವಿಷಯ ತಿಳಿದು ಹೈದರಾಬಾದಿನ ಮೆಹಬೂಬ್ ನಗರದಿಂದ ರಾತ್ರಿಯೇ ಹೊರಟು ಬುಧವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಕಾಮೇಶ್ವರ್‌ನನ್ನು ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ.

ಅಕ್ರಮ-ಸಕ್ರಮ: ಅಂಕಿತ ಬಾಕಿ
ಬೆಂಗಳೂರು:
ಬಹು ನಿರೀಕ್ಷಿತ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತಂತೆ ರಾಜ್ಯಪಾಲರಿಗೆ ವಿವರಣೆ ನೀಡಿ ವಿಧೇಯಕಕ್ಕೆ ಒಪ್ಪಿಗೆ ಪಡೆಯಲು ಮುಂದಾಗಿದೆ. ಈ ಕುರಿತಂತೆ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಲೋಕಸಭೆ ಚುನಾವಣೆಯೊಳಗೆ ಯೋಜನೆ ಜಾರಿಗೆ ತರಲೇ ಬೇಕು ಎಂಬ ನಿಟ್ಟಿನಲ್ಲಿ ಪ್ರಯತ್ನ ನಡೆಸಲು ತೀರ್ಮಾನಿಸಲಾಗಿದೆ. ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಧೇಯಕ ರೂಪಿಸಲಾಗಿತ್ತು. ಇದಕ್ಕೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆದು ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು. ಆದರೆ, ರಾಜ್ಯಪಾಲರು ಕೆಲವು ವಿವರಣೆ ಕೋರಿ ವಿಧೇಯಕವನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ವಿವರಣೆಯೊಂದಿಗೆ ವಿಧೇಯಕವನ್ನು ಮತ್ತೆ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದರೂ ಅದಕ್ಕೆ ಒಪ್ಪಿಗೆ ಸಿಕ್ಕಿರಲಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement