ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ

Srinivasa Murthy VN
Updated On : 17 Nov 2013, 12:13 pm

ಕೋಲಾರ: ಕರ್ನಾಟಕ ವಿರೋಧಿ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಕರವೇ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ವೃತ್ತದಲ್ಲಿ ಕರವೇ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಎಂಇಎಸ್ ಸಂಘಟನೆಯ ಪ್ರತಿಕೃತಿ ದಹಿಸಿ ಎಂಇಎಸ್ ಕರ್ನಾಟಕವನ್ನು ವಿರೋಧಿಸುವ ಮೂಲಕ ನಾಡಿನಲ್ಲಿ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟು ಮಾಡುತ್ತಿದೆ ಎಂದು ಆರೋಪಿಸಿದರು.
ಬೆಳಗಾವಿಯ ಖಡೇ ಬಜಾರದಲ್ಲಿ ಎಂಇಎಸ್ ಮುಖಂಡರು ಸಂಯುಕ್ತ ಮಹಾರಾಷ್ಟ್ರ ಚೌಕ ಎಂಬ ನಾಮಫಲಕ ಅನಧಿಕೃತವಾಗಿ ನಿರ್ಮಾಣ ಮಾಡಿದ್ದು, ಕನ್ನಡಿಗರನ್ನು ಪ್ರಚೋದಿಸುವ ಹಾಗೆ ಘೋಷಣೆಗಳನ್ನು ಬರೆದಿರುವುದಕ್ಕೆ ಖಂಡಿಸಲಾಯಿತು.
ರಾಜ್ಯ ಸರ್ಕಾರದ ಸೌಲತ್ತುಗಳನ್ನು ಪಡೆದು ಒಂದಲ್ಲಾ ಒಂದು ರೀತಿಯಲ್ಲಿ ಕಿತಾಪತಿ ಮಾಡುತ್ತಾ, ಶಾಂತಿ ಕದಡುತ್ತಿರುವ ಎಂಇಎಸ್ ಸಂಘಟನೆ ಮುಖಂಡರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕರವೇ ಜಿಲ್ಲಾ ಅದ್ಯಕ್ಷ ಮೇಡಿಹಾಳ ಎಂ.ಕೆ. ರಾಘವೇಂದ್ರ, ಗೌರವಾದ್ಯಕ್ಷ ಎನ್. ಕೋದಂಡರಾಮಯ್ಯ, ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ರಾಜ್, ಜಿಲ್ಲಾ ಸಂಘಟನಾ ಸಂಚಾಲಕ ಕೂಟೇರಿ ನಾಗರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ವಿ. ಶ್ರೀನಿವಾಸ್, ಎಂ. ಮುನಿರಾಜು, ಉಪಾದ್ಯಕ್ಷೆ ಎಸ್.ಆರ್. ಲಕ್ಷ್ಮಮ್ಮ, ಎಂ.ಎಸ್. ಹರೀಶ್ ಗೌಡ, ವೇಮಗಲ್ ಹೋಬಳಿ ಪ್ರಧಾನ ಕಾರ್ಯದರ್ಶಿ ಎಂ. ಲೋಕೇಶ್, ಗೌರವಾದ್ಯಕ್ಷ ಸಂಪತ್ ಕುಮಾರ್ ಇದ್ದರು.

ಪಾದಯಾತ್ರೆ ಯಶಸ್ವಿ; ಕೃತಜ್ಞತೆ
ಮಾಲೂರು: ವರ್ತೂರು ಕೆರೆ ನೀರನ್ನು ಶುದ್ಧೀಕರಿಸಿ ತಾಲೂಕಿನ ಕೆರೆಗಳಿಗೆ ಹರಿಸುವ ರು. 150 ಕೋಟಿ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲು ಮಾಲೂರಿನಿಂದ ಬೆಂಗಳೂರಿನ ವಿಧಾನಸೌಧಕ್ಕೆ ಹಮ್ಮಿಕೊಂಡಿದ್ದ ಪಾದಯಾತ್ರೆ ಯಶಸ್ವಿಯಾಗಿದ್ದು, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಪಾದಯಾತ್ರೆಗೆ ಸಹಕರಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ತಾಪಂ ಅಧ್ಯಕ್ಷ ಪುಟ್ಟಸ್ವಾಮಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಅನುಷ್ಠಾನಗೊಳ್ಳಲೇ ಬೇಕೆಂಬ ಉದ್ದೇಶದಿಂದ ಬೆಂಗಳೂರಿಗೆ ಪಾದಯಾತ್ರೆ ಮೂಲಕ ತೆರಳಿ ಮುಖ್ಯಮಂತ್ರಿಗೆ ಸಲ್ಲಿಸಿದ ಮನವಿಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಶೀಘ್ರವಾಗಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಜಿಪಂ ಸದಸ್ಯ ರಾಮಸ್ವಾಮಿ ರೆಡ್ಡಿ, ಸಿಎಂರನ್ನು ಭೇಟಿ ಮಾಡಲು ಸಹಕರಿಸಿದ ಕೇಂದ್ರ ಮಂತ್ರಿ ಕೆ.ಎಚ್. ಮುನಿಯಪ್ಪ, ಶಾಸಕ ಎಸ್.ಎನ್. ನಾರಾಯಣಸ್ವಾಮಿರಿಗೆ ಕೃಷ್ಣಯ್ಯ ಶೆಟ್ಟಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ ಎಂದರು. ಯಲ್ಲಮ್ಮ, ಮಧುಸೂಧನ್ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement