ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎ.ವಿ. ಲಕ್ಷ್ಮಮ್ಮಗೆ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ

Vishwanath S
Updated On : 18 Nov 2013, 12:41 pm

ಬಾಗೇಪಲ್ಲಿ: ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ತಾಲೂಕಿನ ಮಿಟ್ಟೇಮರಿ ಹೋಬಳಿಯ ಕಾನಗಮಾಕಲಪಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಎ.ವಿ. ಲಕ್ಷ್ಮಮ್ಮರವರ ಸೇವೆಯನ್ನು ಗುರುತಿಸಿ 2012-13ನೇ ಸಾಲಿನ ರಾಜ್ಯ ಮಟ್ಟದಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ತಾಲೂಕಿನ ಮಿಟ್ಟೆಮರಿ ಹೋಬಳಿ ಕಾನಗಮಾಕಲಪಲ್ಲಿ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಎ.ವಿ.ಲಕ್ಷಮ್ಮ ಅವರು ತಂದೆ ವೆಂಕಟಾಚಲಪತಿ, ತಾಯಿ ಕಮಲಮ್ಮ ದಂಪತಿಗಳಿಗೆ ಮಗಳಾಗಿ 1978 ರಲ್ಲಿ ಗೌರಿಬಿದನೂರು ತಾಲೂಕಿನ ಬಂದಾರ್ಲಹಳ್ಳಿ ಗ್ರಾಮದಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣ ಬಂದಾರ್ಲಹಳ್ಳಿಯಲ್ಲಿ ಮತ್ತು ಪ್ರೌಢಶಿಕ್ಷಣ ನಗರಗೆರೆ ಗ್ರಾಮದಲ್ಲಿ ಮುಗಿಸಿದರು. ಅಂಗನವಾಡಿ ಕಾರ್ಯಕರ್ತೆಯಾಗಿ 12 ವರ್ಷ ಗೌರಿಬಿದನೂರು ತಾಲೂಕಿನಲ್ಲಿ ಹಾಗೂ 6 ವರ್ಷ ತಾಲೂಕಿನ ಹೊಸಹುಡ್ಯ ಹಾಗೂ ಕಾನಗಮಾಲಪಲ್ಲಿ ಗ್ರಾಮದ ಅಂಗನಾಡಿ ಕೇಂದ್ರದಲ್ಲಿ ಹಾಲಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ವತಿಯಿಂದ 2012-2013ನೇ ಸಾಲಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಉತ್ತಮ ಸಾಧನೆ ಮಾಡಿದ ಇವರಿಗೆ ಮಕ್ಕಳ ದಿನಾಚರಣೆಯೊಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲ ಭವನ ಸೊಸೈಟಿ, ರಾಜ್ಯ ಮಕ್ಕಳ ಕಲ್ಯಾಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹಂಸರಾಜ ಭಾರದ್ವಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀರವರು 5 ಸಾವಿರ ನಗದು ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿಯನ್ನು ಪಡೆದಿರುವುದಕ್ಕೆ ತಾಲೂಕಿನ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement