ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೇತ್ರಾ ಪ್ರಕರಣ; ಸಿಬಿಐಗೆ ಒಪ್ಪಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Srinivasa Murthy VN
Updated On : 19 Nov 2013, 1:43 am

ಚಿಕ್ಕಬಳ್ಳಾಪುರ: ಗೌರಿಬಿದನೂರು ನೇತ್ರಾಳ ಸಾವಿನ ಪ್ರಕರಣದ ಬಗ್ಗೆ ಅನುಮಾನಗಳು ಹೆಚ್ಚಾಗುತ್ತಿರುವುದರಿಂದ ಸಮಗ್ರ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಿಂದ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಧಿಕ್ಕಾರದ ಘೋಷಣೆಗಳೊಂದಿಗೆ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ನೇತ್ರಾಳ ಸಾವಿನ ಹಿಂದೆ ಇರುವ ರಹಸ್ಯವನ್ನು ಬಯಲಿಗೆಳೆಯಲು ಉನ್ನತ ಮಟ್ಟದ ತನಿಖೆಯಾಗಬೇಕೆಂದು ಒತ್ತಾಯಿಸಿದರು.
ಗೌರಿಬಿದನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೇತ್ರಾ ಅ.22 ರಂದು ನಾಪತ್ತೆಯಾಗಿ ಇಲ್ಲಿನ ತಾಲೂಕಿನ ವೀರದಿಮ್ಮಮ್ಮನ ಕಣಿವೆಯಲ್ಲಿ ನ.1 ರಂದು ಶವವಾಗಿ ಪತ್ತೆಯಾಗಿದ್ದು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪ್ರತಿಭಟನೆಗಳು ಹೋರಾಟಗಳನ್ನು ನಡೆಸಿದ ಸಲುವಾಗಿ ಪೊಲೀಸರು ಆಕೆಯ ಪಕ್ಕದ ಮನೆಯ ಆರೋಪಿ ರಘುನಾಥನನ್ನು ಬಂಧಿಸಿದ್ದಾರೆ.
ಆದರೆ, ಆರೋಪಿ ಅನುಮಾನಾಸ್ಪದ ಹೇಳಿಕೆಗಳನ್ನು ನೀಡುತ್ತಿದ್ದು ಇದರಿಂದ ನೇತ್ರಾಳ ಸಾವಿನ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಆಗ್ರಹಿಸಿದರು. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯದಿಂದ ಮೃತಳ ಸಾವಿನ ವರದಿ ತರಿಸಿಕೊಳ್ಳುವಲ್ಲಿ ವಿಳಂಬ ಮಾಡಬಾರದೆಂದು ಒತ್ತಾಯಿಸಿದರು.
ಉಪ ವಿಭಾಗಾಧಿಕಾರಿ ಶಾಂತಲಾ ಅವರಿಗೆ ತಮ್ಮ ಮನವಿ ಸಲ್ಲಿಸಿದರು. ಎಬಿವಿಪಿಯ ಕಿರಣ್, ಮಂಜುನಾಥ್, ಶಿವಕುಮಾರ್ ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement