ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ತೊರಲಕ್ಕಿ ಹೋಬಳಿ ಕೇಂದ್ರ ಮಾಡುವೆ: ಶಾಸಕರ ಭರವಸೆ

Srinivasa Murthy VN
Updated On : 24 Nov 2013, 12:58 pm

ಟೇಕಲ್: ತೊರಲಕ್ಕಿ ಸರ್ಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ, ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡುವುದಾಗಿ ಶಾಸಕ ಕೆ.ಎಸ್. ಮಂಜುನಾಥಗೌಡ ತಿಳಿಸಿದರು. ನೂಟವೆ ಗ್ರಾಪಂ ವ್ಯಾಪ್ತಿಯ ತೊರಲಕ್ಕಿ ಗ್ರಾಮದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನಸ್ಪಂದನ ಸಭೆ ಉದ್ಘಾಟಿಸಿ ಮಾತನಾಡಿ, ಆಸ್ಪತ್ರೆಯಲ್ಲಿ ಸಿಬ್ಬಂದಿ ಕಡಿಮೆ ಇರುವುದರಿಂದ ತಾಲ್ಲೂಕು ಆರೋಗ್ಯ ಅಧಿಕಾರಿ ಅನುರಾಧರವರಿಂದ ವಿವರ ಪಡೆದಿದ್ದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಬಳಿ ಈ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದರು. ತಾಲೂಕಿನಲ್ಲಿ ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಿದ್ದು, 243 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ನೀರಿನ ಸಮಸ್ಯೆ ಬಹುತೇಕ ನಿವಾರಣೆಯಾಗಿದೆ. ಮಾಲೂರು ತಾಲೂಕಿನ ಬಹುತೇಕ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದು ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ನಡೆಸಲಾಗುವುದು ಎಂದರು. ಜಿಪಂ ಸದಸ್ಯೆ ರತ್ನಮ್ಮನಂಜೇಗೌಡ, ಕೆ.ವೈ. ನಂಜೇಗೌಡ, ತಹಸೀಲ್ದಾರ್ ಡಾ. ಸುಧಾ, ತಾಪಂ ಅಧ್ಯಕ್ಷ ಪುಟ್ಟಸ್ವಾಮಿ ಮಾತನಾಡಿದರು. ನೂಟವೆ ಗ್ರಾಪಂ ಅಧ್ಯಕ್ಷ ಮಮತಾ ಅಣ್ಣಯ್ಯ, ಉಪಾಧ್ಯಕ್ಷೆ ಉಷಾಮುನೇಗೌಡ, ತಾಪಂ ಉಪಾಧ್ಯಕ್ಷೆ ರಾಜಮ್ಮ, ಪಾಪಣ್ಣ, ಬಿ.ಜಿ. ಮುನಿಶಾಮಿಗೌಡ, ಕ್ಷೇತ್ರನಹಳ್ಳಿ ಕೆ.ಎಸ್. ವೆಂಕಟೇಶ್, ಬಿ.ಜಿ. ಸತೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement