ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಎಂಇಎಸ್ ಭಂಡತನ ಖಂಡಿಸಿ ಪ್ರತಿಭಟನೆ

Srinivasa Murthy VN
Updated On : 26 Nov 2013, 1:34 am

ಕ.ಪ್ರ.ವಾರ್ತೆ ಕೋಲಾರ ನ.25
ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸುತ್ತಿರುವ ಕನ್ನಡ ವಿರೋಧಿ ಸಂಘಟನೆ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರ ಲಾಠಿ ಪ್ರಹಾರ ಖಂಡಿಸಿ ಕರವೇ ಕಾರ್ಯಕರ್ತರು ನಗರದ ಸರ್ಕಾರಿ ಬಸ್‌ನಿಲ್ದಾಣ ವೃತ್ತದಲ್ಲಿ ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು.
ಕನ್ನಡಿಗರ ಪವಿತ್ರ ಸಂಕೇತವಾದ ಕನ್ನಡ ಬಾವುಟವನ್ನು ಸುಡುವುದು, ಕನ್ನಡ ಧ್ವಜಸ್ತಂಭಕ್ಕೆ ಹಾನಿ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ಎಂಇಎಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಬೆಳಗಾವಿ ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಎಂಇಎಸ್ ನಿಷೇಧಿಸಿ: ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು, ಸಂಘಟನೆಯಲ್ಲಿರುವ ಗೂಂಡಾಗಳನ್ನು ಈ ಕೂಡಲೇ ಗಡಿಪಾರು ಮಾಡಬೇಕು, ಮಹಾಮೇಳಾವಕ್ಕೆ ರಾಜ್ಯದಲ್ಲಿ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು.
ಕರವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಇ.ಕೃಷ್ಣೇಗೌಡ, ಸಂಘಟನಾ ಕಾರ್ಯದರ್ಶಿ ಜಿ.ಮುನಿಕೃಷ್ಣ, ಡಿ.ಕೆ.ಪ್ರಭಾಕರ್‌ಗೌಡ, ಲಕ್ಷ್ಮಯ್ಯ, ನವೀನ್, ನಂದೀಶ್, ಪ್ರಭಾಕರ್, ಕುರ್ಕಿ ಬಾಬು, ಮೆಹಬೂಬ್, ಶೇಖರ್, ಲೋಕೇಶ್, ಮುರಳಿ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement