ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಅಧಿಕಾರಿಗಳು ನಿಗಾವಹಿಸಲಿ: ಶಾಸಕ ಸುಧಾಕರ್

Srinivasa Murthy VN
Updated On : 26 Nov 2013, 1:36 am

ಗೌರಿಬಿದನೂರು: ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕೆಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ಅವರು ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಹೋಬಳಿ ಹಳೇಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಗ್ರಾಮೀಣ ಪ್ರದೇಶದ ಜನರಿಗೆ ನೀರು, ಚರಂಡಿ, ವಿದ್ಯುತ್ ಸೌಲಭ್ಯ, ಪಡಿತರ ಚೀಟಿ, ವೃದ್ಧಾಪ್ಯ ವೇತನ ಇವುಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಬೇಡ. ಅರ್ಜಿಗಳನ್ನು ಹೊತ್ತು ನನ್ನಲ್ಲಿಗೆ ಬರುವ ಹಂತ ತಲುಪುವವರೆವಿಗೂ ಕಾಯದೆ ತುರ್ತಾಗಿ ಕೆಲಸಗಳನ್ನು ಮಾಡಿಕೊಂಡಿ ಎಂದು ಸೂಚಿಸಿದ ಅವರು ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯಗಳನ್ನು ಕಡ್‌ಡಾಯವಾಗಿ ತಮ್ಮ ಮನೆಗಳಿಗೆ ಅಳವಡಿಸಿಕೊಳ್ಳಬೇಕು. ಈ ವಿಷಯದಲ್ಲಿ ಜನತೆ ಉದಾಸೀನ ಮಾಡಬಾರದು ಉತ್ತಮ ಆರೋಗ್ಯ ಮತ್ತು ಗ್ರಾಮ ನೈರ್ಮಲ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಬಿಪಿಎಲ್ ಕಾರ್ಡ್‌ದಾರರಿಗೆ 11ಸಾವಿರ ಹಾಗೂ ಎಪಿಎಲ್ ಕಾರ್ಡ್‌ದಾರರಿಗೆ ನಾಲ್ಕು ಸಾವಿರ ನೀಡುತ್ತಿದ್ದು ಶೇ. ನೂರರಷ್ಟು ಉತ್ತಮವಾಗಿ ಅಳವಡಿಸಿಕೊಳ್ಳಬೇಕು. ಈ ಸಂಬಂಧ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕೆಂದರು.
ಹೊನ್ನಪ್ಪನಹಳ್ಳಿಯಿಂದ ಕೊಲಿಮಿಹಳ್ಳಿ 5 ಕಿ.ಮೀ.ವರೆವಿಗೆ ಸುಮಾರು 1.5ಕೋಟಿ ವೆಚ್ಚದಲ್ಲಿ ಡಾಂಬರೀಕರಣ ಕಾಮಗಾರಿಕೆಗೆ ಕ್ರಿಯಾಯೋಜನೆ ತಯಾರಿಸಿ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ತಹಶೀಲ್ದಾರ್ ಡಾ.ಭಾಸ್ಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರೆಡಪ್ಪ, ಬಿಇಓ ಬೈಯಪ್ಪರೆಡ್ಡಿ, ಗ್ರಾಮಪಂಚಾಯ್ತಿ ಅಧ್ಯಕ್ಷ ಉಮಾಶಂಕರ್, ಕಾಮಣ್ಣ, ಮುಖಂಡ ಪಿ.ಎನ್.ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement