ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

30ರಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ

Rashmi Kasaragodu
Updated On : 27 Nov 2013, 2:13 am

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ನ.30 ರ ಶನಿವಾರ ಮಧ್ಯಾಹ್ನ 1 ಗಂಟೆಗೆ ಡಿಸಿಸಿ ಬ್ಯಾಂಕಿನಲ್ಲಿ ಸಭೆ ಕರೆಯಲಾಗಿದೆ. ನ.30 ರಂದು ಬೆಳಿಗ್ಗೆ 11 ಗಂಟೆಯೊಳಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಯಸುವವರು ಬ್ಯಾಂಕಿನ ಸಭಾಂಗಣದಲ್ಲಿ ಚುನಾವಣಾಧಿಕಾರಿಯವರಿಗೆ ನಾಮ ಪತ್ರಗಳನ್ನು ಸಲ್ಲಿಸಬೇಕು.
ಮಧ್ಯಾಹ್ನ 1 ಗಂಟೆಗೆ ನಾಮಪತ್ರಗಳ ಪರಿಶೀಲನೆ.  ಮ.2 ಗಂಟೆಯಿಂದ 2.30ರೊಳಗೆ ನಾಮಪತ್ರ ಹಿಂದಕ್ಕೆ ಪಡೆಯಲು ಅವಕಾಶ, ಅಗತ್ಯ ಬಿದ್ದಲ್ಲಿ ಮ.3 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು ನಂತರ ಮತ ಎಣಿಕೆ ಆರಂಭಿಸಲಾಗುತ್ತದೆ ಎಂದು ಕೋಲಾರ ಉಪವಿಭಾಗಾಧಿಕಾರಿಯೂ ಆಗಿರುವ ಡಿಸಿಸಿ ಬ್ಯಾಂಕ್ ಚುನಾವಣಾಧಿಕಾರಿ ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.


ಕುಡಿತಕ್ಕೆ ದಾಸನಾದ ಯುವಕ ಆತ್ಮಹತ್ಯೆ
ನಗರದ ವೆಂಕಟಗಿರಿ ಕೋಟೆ ನಿವಾಸಿ ಯುವಕನೊಬ್ಬ ನ ಪೋಷಕರು ಕುಡಿತದ ಚಟ ಬಿಡಿಸಲು ಸ್ವಾಮಿ ದೀಕ್ಷೆ ಮಾಲೆ ಹಾಕಿದ್ದರಿಂದ ಬೇಸತ್ತ ಯುವಕ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಸುಟ್ಟ ಗಾಯಗಳಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement