ನೆಲದ ಟೈಲ್ಸ್ಗೆ ಪಾಲೀಶ್ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು
ಕೆಜಿಎಫ್: ಮನೆಯೊಂದರಲ್ಲಿ ನೆಲಕ್ಕೆ ಹಾಕಿದ್ದ ಟೈಲ್ಸ್ಗೆ ಪಾಲೀಶ್ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬರಿಗೆ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ರಾಬರ್ಟ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿವೇಕನಗರ ಬಡಾವಣೆಯಲ್ಲಿ ಗಿರಿಬಾಬು ಆಚಾರಿ ಎಂಬುವರ ಮನೆಯಲ್ಲಿ ರಾಜಸ್ತಾನ ಮೂಲದ ಸುರೇಶ್ಮಾಲಿ(28) ಎಂಬುವರು ಟೈಲ್ಸ್ಗೆ ಪಾಲೀಶ್ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿ ಸುರೇಶ್ಮಾಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರಾಬರ್ಟ್ಸನ್ಪೇಟೆ ಪೊಲೀಸರು ಮತ್ತು ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.