ಅತ್ಯಾಚಾರ ಆರೋಪಿ ಬಂಧನ
ಚಿಂತಾಮಣಿ: ಅತ್ಯಾಚಾರ ಆರೋಪದ ಮೇಲೆ ಬಂಧನಕ್ಕೊಳಗಾದ ಪ್ರಮುಖ ಆರೋಪಿ ಕಳೆದ 1 ತಿಂಗಳ ಹಿಂದೆ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ನಾಯಂದ್ರಹಳ್ಳಿ ಗ್ರಾಮದಲ್ಲಿ ಕಳೆದ 1 ತಿಂಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರ ಮಾಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಆರೋಪಿಯಾಗಿದ್ದ ನಾಗರಾಜ್ ಪೊಲೀಸ್ ಠಾಣೆಯಿಂದ ಮೂತ್ರ ವಿಸರ್ಜನೆಗೆ ಎಂದು ಹೇಳಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಪ್ರಮುಖ ಆರೋಪಿ ನಾಗರಾಜ್ ಬುಧವಾರ ಬೆಳಿಗ್ಗೆ ತಾಲೂಕಿನ ಮದನಪಲ್ಲಿ ರಸ್ತೆಯ ಐಮರೆಡ್ಡಿಹಳ್ಳಿ ಬಳಿ ಇರುವ ಅರಣ್ಯ ಪ್ರದೇಶದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಸಬ್ ಇನ್ಸೆಪೆಕ್ಟರ್ ರಾಘವೇಂದ್ರ ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣ ಆರೋಪಿ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.