ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

'ಕನ್ನಡ ಅಭಿವೃದ್ಧಿಗೆ ಶ್ರಮಿಸಿ'

Mainashree
Updated On : 27 Nov 2013, 11:03 am

ಕೆಜಿಎಫ್: ಕ್ಷೇತ್ರದ ಗಡಿ ಪ್ರದೇಶದಲ್ಲಿ ಕನ್ನಡ ಅಭಿವೃದ್ಧಿಗೆ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಕನ್ನಡ ಅಭಿವೃದ್ಧಿಯಾಗಲಿದೆ ಎಂದು ಉಪನ್ಯಾಸಕ ಜಿ.ಪ್ರಭಾಕರ್‌ರೆಡ್ಡಿ ತಿಳಿಸಿದರು. ಕ್ಯಾಸಂಬಳ್ಳ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲಾ ಮಕ್ಕಳು ಮಾತೃಭಾಷೆ ಯಾವುದೇ ಇರಲಿ ಶಾಲೆಯಲ್ಲಿ ಹಾಗೂ ಕುಟುಂಬ ಸದಸ್ಯರೊಂದಿಗೆ ಕನ್ನಡದಲ್ಲಿ ವ್ಯವಹರಿಸುವ ಮೂಲಕ ಅವರಲ್ಲಿ ಕನ್ನಡದ ಭಾಷೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.
ಇದೇ ವೇಳೆ ಶಾಲೆಯಲ್ಲಿ ನಡೆದ ಜಾನಪದ ಗೀತೆ, ಜಾನಪದ ನೃತ್ಯ ಸೇರಿದಂತೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ವಿವಿಧ ಗ್ರಾಮಗಳ ಸರ್ಕಾರಿ ಶಾಲಾ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಮುಖ್ಯ ಶಿಕ್ಷಕ ಎಂ.ಕೆ. ಶಶಿಕಲಾ, ಅಶ್ವತ್, ವೆಂಕಟಮುನಿಯಪ್ಪ, ಶ್ರೀನಿವಾಸನ್, ರಾಮಮೂರ್ತಿ, ರಾಮಾಂಜಿ, ಸಂಗೀತ ಶಿಕ್ಷಕ ಕುಬೇರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement