ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಧರಣಿ
ಕೋಲಾರ: ನವ ಕರ್ನಾಟಕ ರಕ್ಷಣಾ ವೇದಿಕೆಯಿಂದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಮತ್ತು ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಹಾಗೂ ಅರವಿಂದ ಪಾಟೀಲರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಗರದ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ವೇದಿಕೆಯ ರಾಜ್ಯಾಧ್ಯಕ್ಷ ಎಸ್.ಎನ್.ರಾಜಗೋಪಾಲ ಗೌಡ, ಜಿಲ್ಲಾಧ್ಯಕ್ಷ ಚಿನ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಅಶೋಕ್ಕುಮಾರ್, ಸಂಘಟನಾ ಕಾರ್ಯದರ್ಶಿ ಹುದುಕುಳ ದೇವರಾಜ್ ಹಾಗೂ ಪದಾಧಿಕಾರಿಗಳಾದ ನವೀನ್, ನಾಗರಾಜ, ಶ್ರೀನಿವಾಸ್, ಪ್ರದೀಪ್, ಸೋಮನಾಥ, ಹರಿಕೆರೆ ಸತ್ಯನಾರಾಯಣ ಅವರುಗಳು ಪ್ರತಿಭಟನೆಯಲ್ಲಿ ಇದ್ದರು.