ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆಲೂಗಡ್ಡೆ ಬಿತ್ತನೆ ಬೀಜ ಬೆಲೆ ನಿಯಂತ್ರಣಕ್ಕೆ ಆಗ್ರಹ

Mainashree
Updated On : 28 Nov 2013, 10:54 am

ಕ.ಪ್ರ.ವಾರ್ತೆ  ಗುಡಿಬಂಡೆ  ನ. 28
ಗಗನಕ್ಕೇರಿರುವ ಆಲೂಗಡ್ಡೆ ಬಿತ್ತನೆ ಬೀಜದ ಬೆಲೆ ನಿಯಂತ್ರಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶ ಮಾಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಘಟಕ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಎಚ್.ಪಿ. ಲಕ್ಷ್ಮೀನಾರಾಯಣ, ಬಿತ್ತನೆ ಆಲೂಗಡ್ಡೆ ಬೆಲೆ ಪ್ರಸ್ತುತ ಪ್ರತಿ ಕ್ವಿಂಟ್‌ಗೆ 3 ಸಾವಿರ ಇದೆ. ಇಷ್ಟೊಂದು ಹಣ ನೀಡಿ ಬಿತ್ತನೆ ಖರೀದಿಸಲು ರೈತರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಸಿ ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕೆಂದರು. ಜಿಲ್ಲಾ ಸಮಿತಿ ಸದಸ್ಯ ಅಶ್ವತ್ಥರೆಡ್ಡಿ ಮಾತನಾಡಿದರು. ಗೋಷ್ಠಿಯಲ್ಲಿ ತಾಪಂ ಉಪಾಧ್ಯಕ್ಷ ಆದಿನಾರಾಯಣರೆಡ್ಡಿ, ಘಟಕದ ತಾಲೂಕು ಅಧ್ಯಕ್ಷ ಶ್ರೀನಿವಾಸ, ಈಶ್ವರಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement