ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರೈತನ ಆತ್ಮಹತ್ಯೆ ಖಂಡಿಸಿ ಪ್ರತಿಭಟನೆ

Mainashree
Updated On : 28 Nov 2013, 10:52 am

ಚಿಂತಾಮಣಿ: ಬೆಳಗಾವಿಯಲ್ಲಿ ರೈತನ ಆತ್ಮಹತ್ಯೆ ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಕೂಡಲೇ ವಜಾ ಮಾಡಲು ಆಗ್ರಹಿಸಿ ಸಿಪಿಎಂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಯೋಗಿನಾರಾಯಣ ವೃತ್ತದ ಬಳಿ ಸಿಪಿಐ(ಎಂ) ಕಾರ್ಯಕರ್ತರು ರಾಜ್ಯ ಸರ್ಕಾರ ನಿರ್ಲಕ್ಷದಿಂದ ರೈತ ಆತ್ಮಹತ್ಯೆಗೆ ಶರಣಾಗಿದ್ದು, ಕೂಡಲೇ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದರು. ಮುಖಂಡ ಎಂ. ಗೋಪಿನಾಥ್ ಮಾತನಾಡಿ, ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ದೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು. ರೈತನ ಆತ್ಮಹತ್ಯೆಗೆ ಕಾಂಗ್ರೆಸ್ ಸರ್ಕಾರವೇ ಕಾರಣ. ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಮೊಸಳೆ ಕಣ್ಣೀರು ಸುರಿಸುತ್ತಿರುವುದಾಗಿ ಟೀಕೆ ಮಾಡಿದರು. ರಾಜ್ಯ ಪ್ರಾಂತ ಸಂಘದ ಲಕ್ಷ್ಮಿನಾರಾಯಣರೆಡ್ಡಿ, ಗೋಪಸಂದ್ರ ಶ್ರೀನಿವಾಸರೆಡ್ಡಿ, ಜಹೀರ್ ಪಾಷ, ಬಾಬಾಜಾನ್, ಬಾಬುರೆಡ್ಡಿ, ಆಟೋ ಶ್ರೀನಿವಾಸ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement