ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಸೂಚನೆ
ಚಿಂತಾಮಣಿ: ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳನ್ನು ಶೀಘ್ರ ವಿಲೇವಾರಿ ಮಾಡಲು ಲೋಕಾಯುಕ್ತ ಅಧಿಕಾರಿ ಮಂಜೇಗೌಡ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಮತ್ತು ನಗರ ಪ್ರದೇಶದಿಂದ ಜನರು ಸಮಸ್ಯೆಗಳ ಬಗ್ಗೆ ಕಚೇರಿ ಸುತ್ತ ಪ್ರದರ್ಶನ ಮಾಡುವುದನ್ನು ತಪ್ಪಿಸಲು ಅಧಿಕಾರಿಗಳು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಸೂಚಿಸಿದರು. ಕಂದಾಯ ಇಲಾಖೆ, ನಗರಸಭೆ ಹಾಗೂ ಗ್ರಾಪಂ ವ್ಯಾಪ್ತಿಯ ಅರ್ಜಿಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ತಾಲೂಕು ದಂಡಾಧಿಕಾರಿ ಕೃಷ್ಣಸ್ವಾಮಿ, ನಗರಸಭೆ ಆಯುಕ್ತ ಚನ್ನೇಗೌಡ, ತಾಪಂ ಇಒ ವಸಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ. ರಂಗಯ್ಯ, ರೇಷ್ಮೆ ಸಹಾಯಕ ನಿರ್ದೇಶಕ ಕಾಳಪ್ಪ ಭಾಗವಹಿಸಿದ್ದರು.