ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಕ್ಕರೆ ಕಾರ್ಖಾನೆ ವಿರುದ್ಧ ಕ್ರಮಕ್ಕೆ ಆಗ್ರಹ

Rashmi Kasaragodu
Updated On : 30 Nov 2013, 12:35 pm

ಕ.ಪ್ರ.ವಾರ್ತೆ   ಕೋಲಾರ   ನ.29
ಕಬ್ಬು ಬೆಳೆಗಾರರಿಗೆ ಸಕಾಲಕ್ಕೆ ಹಣ ನೀಡದೆ ರೈತರ ಶೋಷಣೆ ಮಾಡುತ್ತಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾದಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೇರಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿದರು.
ಬೆಳಗಾವಿಯಲ್ಲಿ ರೈತನೊಬ್ಬ ಸಕ್ಕರೆ ಕಾರ್ಖಾನೆಗಳ ಮಾಲೀಕರಿಂದ ಬಾಕಿ ಹಣ ಬಂದಿಲ್ಲವೆಂದು ಹಾಗೂ ಬೆಂಬಲ ಬೆಲೆ ನಿಗದಿಗೆ ಒತ್ತಾಯಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವೆಂದು ಪ್ರತಿಭಟನಾಕಾರರು ಆರೋಪಿಸಿದರು.
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ರಾಜ್ಯ ಸರ್ಕಾರ ಈ ಕೂಡಲೇ ಹೆಚ್ಚಿನ ಪರಿಹಾರ ಹಾಗೂ ಮೃತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು, ಘಟನೆಗೆ ಕಾರಣರಾಗಿರುವ ಸಕ್ಕರೆ ಕಾರ್ಖಾನೆ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ಶಂಕರನಾರಾಯಣ ರೆಡ್ಡಿ, ರಾಜ್ಯ ಕಾರ್ಯದರ್ಶಿ ನೀಲಿ ಜಯಶಂಕರ್, ತಾಲೂಕು ಅಧ್ಯಕ್ಷ ಚಿನ್ನಾಪುರ ನಾರಾಯಣಸ್ವಾಮಿ, ರಾಜ್ಯ ಅಲ್ಪಸಂಖ್ಯಾತರ ಮೋರ್ಚಾದ ಕಾರ್ಯದರ್ಶಿ ಜಮೀಲ್, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕೆಂಬೋಡಿ ನಾರಾಯಣಸ್ವಾಮಿ, ಮು. ರಾಘವೇಂದ್ರ, ನರಸಿಂಹರಾಜು, ಸೈಯದ್ ಇಸಾಕ್ ಬರೀದ್, ಸಾಹುಕಾರ್ ಶಂಕರಪ್ಪ, ವಕೀಲ ಎಂ.ಪಿ. ನಾರಾಯಣಸ್ವಾಮಿ, ಮಂಜುನಾಥ್ ಗೌಡ, ಸುರೇಶ್ ಕುಮಾರ್, ಪುನೀತ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement